
ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಲಿ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ, 29- ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣ ಪಡೆದುಕೊಳ್ಳುವ ಮೂಲಕ ಹೆಚ್ಚು ಅಭ್ಯಾಸ ಮಾಡಲು ಮುಂದಾಗಬೇಕು ಎಂದು ಕಾಲೇಜಿನ ಪ್ರಾಚಾರ್ಯ ಕಿರಣ್ಕುಮಾರ ಕಬ್ಬಿಣದ ಹೇಳಿದರು.
ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಸರಕಾರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.
ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್, ಟಿವಿ ಕಡೆ ಹೆಚ್ಚು ವಾಲುತ್ತಿದ್ದು, ಸದಾ ಗ್ರಂಥಾಲಯ, ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡು ಹೆಚ್ಚಿನ ಜ್ಷಾನರ್ಜನೆ ಹೊಂದಬೇಕಿದೆ.
ಈ ಭಾಗದಲ್ಲಿ ಮಕ್ಕಳನ್ನು ಪಾಲಕರು ಹೆಚ್ಚಾಗಿ ಶಿಕ್ಷಣ ಕೊಡಿಸಲು ಮುಂದಾಗಬೇಕಿದೆ. ಕೇವಲ ಪಿಯುಸಿ ಶಿಕ್ಷಣ ಮುಗಿಸಿದ ಬಳಿಕ ಮಕ್ಕಳನ್ನು ಕಲಿಕೆಯಲ್ಲಿ ತೊಡಗಲು ಹಿಂಜರಿಸದೇ ಉನ್ನತ ಶಿಕ್ಷಣದತ್ತಾ ಕೊಂಡಯ್ಯುವ ಕಾರ್ಯ ವಾಗಬೇಕಿದೆ ಎಂದು ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ್ ಸಜ್ಜನ್, ಉಪನ್ಯಾಸಕರಾದ ರುದ್ರೇಶ್, ಬಸವರಾಜ್ ಗುಂಗಾಡಿ, ಗವಿಸಿದ್ದಪ್ಪ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ವೇಳೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.