2c136fae-be38-4577-97e1-318669006cc9

ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿ‌ : ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 30-  2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ ಅನುದಾನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಸೆಕ್ಟರ್ ನಂ.22, ಪೊಲೀಸ್ ಪ್ಯಾಲೇಸ್ ಹತ್ತಿರ, ನವನಗರ, ಬಾಗಲಕೋಟೆ ಇವರ ಕಾರ್ಯಾಲಯದಿಂದ ಶುಲ್ಕರಹಿತವಾಗಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08354-235434 ಗೆ ಸಂಪರ್ಕಿಸಬಹುದು ಎಂದು ಬಾಗಲಕೋಟೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!