2c136fae-be38-4577-97e1-318669006cc9

ಹೊಸ ನಳ ಸಂಪರ್ಕ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕುಕನೂರ, ಪಟ್ಟಣ ಪಂಚಾಯತ್ ವತಿಯಿಂದ 2024-25ನೇ ಸಾಲಿನ ಎಸ್.ಎಫ್.ಸಿ. ಅನುದಾನದಲ್ಲಿ ಶೇ.24.10 ಹಾಗೂ 7.25ರ ಯೋಜನೆಯಡಿಯಲ್ಲಿ ಪ.ಜಾತಿ ಹಾಗೂ ಪ.ಪಂಗಡ ಹಾಗೂ ಇತರೇ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಹಾಗೂ ಪ.ಜಾತಿ & ಪ.ಪಂಗಡ ಜನಾಂಗದವರಿಗೆ ಹೊಸ ನಳ ಸಂಪರ್ಕ ಕಲ್ಪಿಸುವುದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ :  ಪರಿಶಿಷ್ಟ ಜಾತಿ & ಪರಿಶಿಷ್ಷ ಪಂಗಡ ಹಾಗೂ ಇತರೆ ಬಡ ಜನಾಂಗದ ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಹಿಂದಿನ ವರ್ಷದ ಅಂಕಪಟ್ಟಿ, ಚಾಲ್ತಿ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಿಕ್ಷಣ ಸಂಸ್ಥೆಯಿಂದ ವ್ಯಾಸಂಗ ಮೂಲ ಪ್ರಮಾಣ ಪತ್ರ, ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರಿಂದ ಯಾವುದೆ ಪ್ರೋತ್ಸಾಹ ಧನ ಪಡೆಯದೇ ಇರುವ ಬಗ್ಗೆ ಸಂಬಂಧಿಸಿದ ಇಲಾಖೆಯಿಂದ ದೃಢೀಕರಣ ಪ್ರಮಾಣ ಪತ್ರ, ಚಾಲ್ತಿ ವರ್ಷದ ಜಾತಿ & ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಸ್ಪಷ್ಟವಾಗಿರುವ ಬ್ಯಾಂಕ ಪಾಸ್ ಪುಸ್ತಕದ ಝೆರಾಕ್ಸ ಪ್ರತಿ ಹಾಗೂ ಇತ್ತೀಚಿನ ಒಂದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

ಹೊಸ ನಳ ಸಂಪರ್ಕ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರಿಗೆ ಹೊಸ ನಳ ಸಂಪರ್ಕ ಕಲ್ಪಿಸಲಾಗುತ್ತಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳು ಚಾಲ್ತಿ ವರ್ಷದ ನಮೂನೆ-3, ಚಾಲ್ತಿ ವರ್ಷದ ಆಸ್ತಿ ತೆರಿಗೆ ರಶೀದಿ & ಎಸ್.ಎ.ಎಸ್. ಫಾರಂ, ಚಾಲ್ತಿ ವರ್ಷದ ಜಾತಿ & ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ನಳದ ನಕ್ಷೆ, ಸ್ಪಷ್ಠವಾಗಿರುವ ಬ್ಯಾಂಕ ಪಾಸ್ ಪುಸ್ತಕದ ಝೆರಾಕ್ಸ ಪ್ರತಿ ಮತ್ತು ಇತ್ತೀಚಿನ ಒಂದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದ್ದು, ಅರ್ಜಿದಾರರು ಪ್ರಸಕ್ತ ಸಾಲಿನಲ್ಲಿ ಈ ಪ್ರೋತ್ಸಾಹ ಧನ ಸೌಲಭ್ಯ ಪಡೆದಿರಬಾರದು, ಅರ್ಜಿದಾರರು ಕುಕನೂರು ಪಟ್ಟಣ ಪಂಚಾಯತ ಖಾಯಂ ನಿವಾಸಿಯಾಗಿರಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ

. ಪ.ಜಾ ಅಥವಾ ಪ.ಪಂ ಜನಾಂಗದವರಿಗೆ ಹೊಸ ನಳ ಸಂಪರ್ಕಕ್ಕಾಗಿ ಅಗತ್ಯ ಎಲ್ಲಾ ದಾಖಲೆಗಳೊಂದಿಗೆ ಮೊದಲು ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಮೊದಲನೇ ಆಧ್ಯತೆ ನೀಡಲಾಗುವುದು. ಪೂರ್ಣ ದಾಖಲಾತಿ ಇರದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೇ ತಿರಸ್ಕರಿಸಲಾಗುವುದು. ಅಗತ್ಯ ಬಿದ್ದಲ್ಲಿ ಪಟ್ಟಣ ಪಂಚಾಯತ್ ಕಾರ್ಯಾಲಯದಿಂದ ಕೋರಿದ ದಾಖಲೆಗಳನ್ನು ಸಹ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಪ.ಪಂ ವಿಷಯ ನಿರ್ವಾಹಕರನ್ನು ಭೇಟಿ ಮಾಡಬಹುದು. ಅರ್ಹ ವಿದ್ಯಾರ್ಥಿಗಳು ಹಾಗೂ ಫಲಾನುಭವಿಗಳು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳುವಂತೆ ಕುಕನೂರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!