ಕೊಪ್ಪಳ : 13ರಂದು ಮಹಿಳೆಯರಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 8- ಮಹಿಳೆಯರಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಗಸ್ಟ್ 13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠತ ಕಂಪನಿಯು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್ಎಸ್ಎಲ್.ಸಿ, ಪಿಯುಸಿ, ಡಿಪ್ಲೋಮಾ, ಮತ್ತು ಪದವಿಧರ ಮಹಿಳಾ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಉಚಿತ ಪ್ರವೇಶವಿರುತ್ತದೆ.
ಈ ನೇರ ಸಂದರ್ಶನದಲ್ಲಿ ಭಾಗವಹಿಸುವ ಅರ್ಹ ಮಹಿಳಾ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ(ರೆಜುಮ್) ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ನೇರ ಸಂದರ್ಶನದನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿಜಿಲ್ಲಾಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859, ಮೊಸಂ: 6361143422 ಹಾಗೂ 8431525339 ಮೂಲಕ ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
