ಅಂಗನವಾಡಿಗಳಲ್ಲಿನ ನೂನ್ಯತೆ ಸರಿಪಡಿಸಲು ಅಗತ್ಯ ಕ್ರಮ : ನ್ಯಾ.ಚಂದ್ರಶೇಖರ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 10- ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲೆಯ ಏಳು ತಾಲೂಕುಗಳ ವ್ಯಾಪ್ತಿಯಲ್ಲಿನ ಕೆಲವು ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನ್ಯಾಯಾಧೀಶರು ಅನೀರಿಕ್ಷಿತ ಭೇಟಿ ನೀಡಿದ ವೇಳೆ ಸಾಕಷ್ಟು ನ್ಯೂನತೆಗಳು ಕಂಡು ಬಂದಿವೆ. ಈ ಬಗ್ಗೆ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸವಿರವಾದ ವರದಿ ತಯಾರಿಸುತ್ತಿದ್ದು, ಈ ಸಮಸ್ಯೆಗಳನ್ನು ಬೇಗನೆ ಸರಿಪಡಿಸಲು ಕೋರಿ ಉಚ್ಛ ನ್ಯಾಯಾಲಯಕ್ಕೆ ಮತ್ತು ರಾಜ್ಯ ಸರ್ಕಾರಕ್ಕೆ ವರದಿಯನ್ನು ಕಳುಹಿಸಲಾಗುವುದು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ಚಂದ್ರಶೇಖರ ಸಿ ಅವರು ತಿಳಿಸಿದರು.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಆಗಸ್ಟ್ 9ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.
ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಅಪೌಷ್ಠಿಕ ನಿವಾರಣಾ ರಾಜ್ಯ ಸಲಹಾ ಸಮಿತಿ ಅಧ್ಯಕ್ಷರಾದ ವೇಣುಗೋಪಾಲಗೌಡ ಅವರು ಬೆಂಗಳೂರಿನಲ್ಲಿ ಅಂಗನವಾಡಿಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದಾಗ ಕೆಲವು ನೂನ್ಯತೆಗಳು ಕಂಡು ಬಂದು ಅದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಮುಂದುವರೆದು ಅಪೌಷ್ಠಿಕ ನಿವಾರಣಾ ರಾಜ್ಯ ಸಲಹಾ ಸಮಿತಿಯಿಂದ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಡಬ್ಲೂö್ಯ.ಪಿ.ನಂ.38157/2011ರಲ್ಲಿ ವರದಿ ಸಲ್ಲಿಸಬೇಕಾಗಿರುವ ಕಾರಣ ಆಯಾ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಸದಸ್ಯ ಕಾರ್ಯದರ್ಶಿಗಳು ಆಯಾ ಜಿಲ್ಲೆಗಳಲ್ಲಿನ ಅಂಗನವಾಡಿಗಳಿಗೆ ಭೇಟಿ ನೀಡಿ ಅಂಗನವಾಡಿಗಳಲ್ಲಿನ ಮೂಲಭೂತ ಸೌಕರ್ಯ ಕುಂದುಕೊರತೆಗಳ ಕುರಿತು ಪರಿಶೀಲಿಸಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆ ಸಮೇತ ವರದಿ ಸಲ್ಲಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಿಳಿಸಿದನ್ವಯ ಕೊಪ್ಪಳ ಜಿಲ್ಲೆಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿ ಕೊಪ್ಪಳ ಜಿಲ್ಲೆಯ 7 ತಾಲೂಕುಗಳ ವ್ಯಾಪ್ತಿಯ ವಿವಿಧ ಅಂಗನವಾಡಿಗಳಿಗೆ ಭೇಟಿ ನೀಡಿ ಅಲ್ಲಿ ಕಂಡು ಬಂದ ನೂನ್ಯತೆಗಳ ಬಗ್ಗೆ ವರದಿ ಸಿದ್ಧಪಡಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಅಂಗನವಾಡಿಗಳ ಭೇಟಿ ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯ ಕಾರ್ಯದರ್ಶಿಗಳು ಮತ್ತು ವಿವಿಧ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳು ಮತ್ತು ನ್ಯಾಯಾಧೀಶರು ಭಾಗಿಯಾಗಿದ್ದರು. ಕೊಪ್ಪಳ ಜಿಲ್ಲೆಯ ಕೆಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಹಳಷ್ಟು ಅಂಗನವಾಡಿಗಳಲ್ಲಿ ಶುಚಿತ್ವ ಕಾಯ್ದುಕೊಂಡಿರಲಿಲ್ಲ. ಮಕ್ಕಳಿಗೆ ಯಾವ ವಾರದಂದು ಯಾವ ಆಹಾರ ನೀಡಬೇಕು ಎನ್ನುವ ಫಲಕ ಹಾಕಿರಲಿಲ್ಲ. ಹಾಜರಾತಿ ಪುಸ್ತಕದಲ್ಲಿ ಕಾಣಿಸಿರುವ ಸಂಖ್ಯೆಯಷ್ಟು ಮಕ್ಕಳು ಇರಲಿಲ್ಲ. ಬಹಳಷ್ಟು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ ಕುರಿತು ಮತ್ತು ಚಟುವಟಿಕೆಗಳ ನೀಡಿದ ಕುರಿತು ಮಾಹಿತಿ ಇರಲಿಲ್ಲ. ಕೆಲವು ಅಂಗನವಾಡಿಗಳಿಗೆ ವಿದ್ಯುತ್ ಸರಬರಾಜು ಇರಲಿಲ್ಲ. ಶೌಚಾಲಯಗಳು ಶುಚಿತ್ವದಿಂದ ಕೂಡಿರಲಿಲ್ಲ. ಕೆಲವು ಶೌಚಾಲಯಗಳಿಗೆ ಬಾಗಿಲು ವ್ಯವಸ್ಥೆ ಇರಲಿಲ್ಲ. ಕೆಲವು ಶೌಚಾಲಯಗಳ ಬಾಗಿಲುಗಳೇ ತೆಗೆದಿರಲಿಲ್ಲ. ಬಹಳಷ್ಟು ಶೌಚಾಲಯಗಳಿಗೆ ನೀರಿನ ಸಂಪರ್ಕವೇ ಇರಲಿಲ್ಲ.
ಅಂಗನವಾಡಿಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ಕೆಲವು ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಧಾನ್ಯಗಳ ಪ್ಯಾಕೇಟಗಳನ್ನು ಇಡಲಾಗಿತ್ತು. ಬಹಳಷ್ಟು ಅಂಗನವಾಡಿಗಳಲ್ಲಿ ಹೊಟ್ಟು ಮತ್ತು ಹಿಟ್ಟು ಮಿಶ್ರಿತ ರವೇ ಇತ್ತು. ಅದರಲ್ಲಿ ನುಸಿ ಇತ್ತು. ತರಕಾರಿ ಖರೀದಿಸಿದ ಮತ್ತು ಉಪಯೋಗಿಸಿದ ಖುರುಹುಗಳು ಇರಲಿಲ್ಲ. ಬಹಳಷ್ಟು ಅಂಗನವಾಡಿಗಳಲ್ಲಿ ಆಟೀಕೆ ಸಾಮಾನುಗಳು ಮಕ್ಕಳ ಕೈಗೆ ಸಿಗುವಂತೆ ಇಟ್ಟಿರಲಿಲ್ಲ ಮತ್ತು ಧೂಳುಗಟ್ಟಿತ್ತು. ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆವರೆಗಿನ ಅವಧಿಯಲ್ಲಿ ಬಹಳಷ್ಟು ಅಂಗನವಾಡಿಗಳು ನಡೆಯುತ್ತಿಲ್ಲ. ಅಂಗನವಾಡಿಗಳಿಗೆ ಕಾಂಪೌಂಡ್ ಗೋಡೆ ಇರಲಿಲ್ಲ. ಕೆಲವು ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಇರುವುದಿಲ್ಲ. ಮಳೆ ಬಂದಾಗ ಕೆಲವು ಅಂಗಡಿಗಳು ಸೋರುತ್ತಿದ್ದವು. ವಹಿಗಳಲ್ಲಿ ಕಂಡುಬAದAತೆ ಮಕ್ಕಳು ಮತ್ತು ಬಾಣಂತಿಯರಿಗೆ ಸರಿಯಾಗಿ ಆಹಾರ ಕೊಡದಿರುವುದು ಕಂಡು ಬಂದಿದೆ. ಅಂಗನವಾಡಿಗಳಿಗೆ ಕಳಪೆಮಟ್ಟದ ಆಹಾರ ಪೂರೈಕೆ ಆಗುತ್ತಿರುವುದು ಕಂಡುಬAದಿತು. ಆಹಾರ ಸಾಮಗ್ರಿ ದಾಸ್ತಾನು ಮಾಡಲು ಅಂಗನವಾಡಿಗಳಲ್ಲಿ ವ್ಯವಸ್ಥೆ ಇರುವುದಿಲ್ಲ.
ಒಳಗಡೆ ಹೋಗಲು ಆಗದಷ್ಟು ಕೆಲವು ಅಂಗನವಾಡಿಗಳಲ್ಲಿ ಗಬ್ಬುವಾಸನೆ ಕಂಡು ಬಂದಿದೆ. ಗೈರು ಹಾಜರಾದ ಮಕ್ಕಳ, ಬಾಣಂತಿಯರ ಆಹಾರ ಧಾನ್ಯದ ದಾಸ್ತಾನಿನ ಬಗ್ಗೆ ಸರಿಯಾದ ಮಾಹಿತಿ ಇರಲಿಲ್ಲ. ಅಂಗನವಾಡಿಗಳಿಗೆ ಭೇಟಿ ನೀಡಿದಾಗ ಇಂತಹ ನ್ಯೂನ್ಯತೆಗಳು ಕಂಡು ಬಂದಿವೆ ಎಂದು ನ್ಯಾಯಾಧೀಶರು ವರದಿ ಮಾಡಿದ್ದು, ಈ ನೂನ್ಯತೆಗಳ ವಿವರಗಳನ್ನು ಕ್ರೋಢೀಕರಿಸಿ ಸಮಗ್ರ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ.
ಅಂಗನವಾಡಿಗಳಲ್ಲಿ ನೂನ್ಯತೆಗಳು ಕಂಡು ಬಂದಲ್ಲಿ ಈ ಬಗ್ಗೆ ವರದಿ ಮಾಡಬೇಕು ಎನ್ನುವ ನಿರ್ದೇಶನ ಇರುವ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ವರದಿಯನ್ನು ಕಳುಹಿಸಲಾಗುತ್ತದೆ.
ಈ ವರದಿಯ ಬಗ್ಗೆ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವೇ ಕ್ರಮ ವಹಿಸಬೇಕು ಎಂದು ಉಚ್ಛ ನ್ಯಾಯಾಲಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಿರ್ದೇಶನ ಬಂದಲ್ಲಿ, ಅಂಗನವಾಡಿಗಳಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಿಯಮಾನುಸಾರ ಕ್ರಮ ವಹಿಸುತ್ತದೆ ಎಂದು ನ್ಯಾಯಾಧೀಶರು ತಿಳಿಸಿದರು.
ಈ ವರದಿಯನ್ನು ಆಧರಿಸಿ ಸೂಕ್ತ ಕ್ರಮ ವಹಿಸಲು ಕೊಪ್ಪಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮತ್ತು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸಹ ವರದಿಯನ್ನು ಸಲ್ಲಿಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆರ್.ಒಡೆಯರ್, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಮಹಾಂತೇಶ ದರ್ಗದ ಸೇರಿದಂತೆ ಇತರರು ಹಾಜರಿದ್ದರು.
