ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಕರುನಾಡ ಬೆಳಗು ಸುದ್ದಿ
ಕುಕನೂರ, 12- ತಾಲೂಕಿನ ಮಂಗಳೂರು ಗ್ರಾಮದ ಕೆಪಿಎಸ್ ಶಾಲೆಯಲ್ಲಿ ರವಿವಾರ ದಿವಸ 78ನೆಯ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸ್ವಾತಂತ್ರ್ಯ ಹೋರಾಟ ನಡೆದು ಬಂದ ಹಾದಿಯೆಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯ ಮೌಲ್ಯಮಾಪನವನ್ನು ಉಪನ್ಯಾಸಕರು ಶರಣಪ್ಪ ಉಮಚಗಿ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಕೆಪಿಎಸ್ ಪ್ರಾಥಮಿಕ ಶಾಲೆಯ ಸಂಗೀತ ಶಿಕ್ಷಕರಾದ ಸೋಮಪ್ಪ ನಾಯಕ್, ಸಹ ಶಿಕ್ಷಕರಾದ ಆನಂದ ಚಿನ್ನೂರು ಉಪಸ್ಥಿತರಿದ್ದರು, ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಶಿವಲೀಲಾ ಕಳಕಪ್ಪ ನಿಂಗಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಗಳೂರು, ದ್ವಿತೀಯ ಸ್ಥಾನ ಮಹೇಶ್ ಶರಣಪ್ಪ ಬ್ಯಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ, ತೃತೀಯ ಸ್ಥಾನ ಪವಿತ್ರಾ ಶರಣಪ್ಪ ಲದ್ದಿ ಪಡೆದರು.
ಈ ವಿದ್ಯಾರ್ಥಿಗಳಿಗೆ ಆಗಸ್ಟ್ 15 78ನೇ ಸ್ವಾತಂತ್ರ್ಯ ದಿನಾಚರಣೆಯ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಭಿನಂದನಾ ಪತ್ರ ನೀಡಲಾಗುವುದು ಎಂದು ಕಾರ್ಯಕ್ರಮದ ಆಯೋಜಕರು ರವಿ ನಿಂಗಪ್ಪಆಗೋಲಿ ಹಾಗೂ ಪತ್ರಕರ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
