WhatsApp Image 2024-08-14 at 5.02.02 PM

ರೈತರಿಗೆ ಅನಿಯಮಿತ ವಿದ್ಯುತ್ ಪೂರೈಕೆ ಗಾಯದ ಮೇಲೆ ಬರೆ : ಎಂ.ಎಸ್.ಸೋಮಲಿಂಗಪ್ಪ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 14- ವಿದ್ಯುತ್ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಅನಿಯಮಿತ ವಿದ್ಯುತ್ ಪೂರೈಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ನದಿ ದಡದಲ್ಲಿರುವ ಪಂಪ್ ಸೆಟ್ ಹೊಂದಿರುವ ರೈತರಿಗೆ ವಿದ್ಯುತ್ ಸಮಸ್ಯೆಯಿಂದಾಗಿ ನೀರಿದ್ದರೂ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಶಾಸಕ ಎಂ ಎಸ್ ಸೋಮಲಿಂಗಪ್ಪ ಆಗ್ರಹಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು ವಿದ್ಯುತ್ ಸಮಸ್ಯೆ ಉದ್ಭವಿಸುವ ಮೊದಲು ರೈತರ ಪಂಪ್ ಸೆಟ್ ಗಳಿಗೆ ದಿನಕ್ಕೆ 8 ಗಂಟೆ ಕಾಲ ಥ್ರೀ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿತ್ತು ನೀರಿನ ಅವಶ್ಯಕತೆ ಹೆಚ್ಚಿದೆ ಇಂತಹ ಸಂದರ್ಭದಲ್ಲಿಯೇ ವಿದ್ಯುತ್ ಸರಬರಾಜಿನಲ್ಲಿ ರೈತರ ಸಂಕಷ್ಟ ಹೆಚ್ಚಾಗಿದೆ ರೈತರಿಗೆ ನಿರಂತರ ವಿದ್ಯುತ್ ಒದಗಿಸಬೇಕು ತುಂಗಭದ್ರ ನೀರು ಪೋಲಾಗಿ ಹೋಗುತ್ತಿರುವ ನೀರನ್ನು ಕಾಲುವೆ ಮುಖಾಂತರ ಹಗರಿ ನದಿಗೆ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಈ ಸಮಸ್ಯೆಗೆ ಶೀಘ್ರ ಪರಿಹಾರವನ್ನು ಒದಗಿಸಬೇಕು ಇಲ್ಲದಿದ್ದಲ್ಲಿ ತಾಲೂಕ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಎಸ್ಸಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಕೆಲಿ ವೀರೇಶ್, ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಿ ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಬೆಳಗಲ್ ಬಸವರಾಜ, ಎಸ್ ಟಿ ತಾಲೂಕು ಅಧ್ಯಕ್ಷ ಬೆಳಗಲ್ ಶಿವಪ್ಪ, ಮುಖಂಡ ಬಳ್ಳೊಳ್ಳಿ ಶೇಖಣ್ಣ, ಈರಯ್ಯ ಮಹಾದೇವ ಇದ್ದರು.

Leave a Reply

Your email address will not be published. Required fields are marked *

error: Content is protected !!