2c136fae-be38-4577-97e1-318669006cc9

78ನೇ ಸ್ವಾತಂತ್ರೋತ್ಸವದ ಅಂಗವಾಗಿ ‘ಏಕ್ ಪೇಡ್ ಮಾ ಕೇ ನಾಮ್’ ಅಭಿಯಾನದ ಉದ್ಘಾಟನೆ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 14-ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ನೌಕರರ ಸಂಘ ಮತ್ತು ಜಿಲ್ಲಾ ಅರಣ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 78ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ‘ಏಕ್ ಪೇಡ್ ಮಾ ಕೇ ನಾಮ್’ ಅಭಿಯಾನದ ಉದ್ಘಾಟನೆ ಹಾಗೂ ಚಾಲನೆ ಸಮಾರಂಭ ಕಾರ್ಯಕ್ರಮವನ್ನು ಆ.15 ರಂದು ಬೆಳಿಗ್ಗೆ 07.45 ಗಂಟೆಗೆ ನೂತನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡುವರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮ ಅವರು ಅಧ್ಯಕ್ಷತೆ ವಹಿಸುವರು.

ಸಮಾರಂಭದಲ್ಲಿ ಜಿಲ್ಲಾ ಅರಣ್ಯ ಉಪ-ಸಂರಕ್ಷಣಾಧಿಕಾರಿ ಸಂದೀಪ್ ಹೆಚ್.ಸೂರ್ಯವಂಶಿ ಸೇರಿದಂತೆ ಬಳ್ಳಾರಿ ನಗರದ ಎಲ್ಲಾ ನ್ಯಾಯಾಧೀಶರು, ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಎಲ್ಲಾ ನ್ಯಾಯಾವಾದಿಗಳು, ಜಿಲ್ಲಾ ಅರಣ್ಯ ಇಲಾಖೆಯ ಸಿಬ್ಬಂದಿ, ಜಿಲ್ಲಾ ನ್ಯಾಯಾಂಗದ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸಮಸ್ಥ ನೌಕರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!