
ಯಲಬುರ್ಗಾ ತಾಪಂ ಕಚೇರಿಯಲ್ಲಿ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆ
ಕರುನಾಡ ಬೆಳಗು ಸುದ್ದಿ
ಯಲಬುರ್ಗಾ 15 ದೇಶದ ಸ್ವಾತಂತ್ರ್ಯ ಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ಈ ಸಮಯದಲ್ಲಿ ಸ್ಮರಿಸಿಬೇಕು ಮತ್ತು ಗೌರವ ಸಮರ್ಪಣೆ ಸಲ್ಲಿಸಬೇಕು ಎಂದು ತಾ ಪಂ. ಇ. ಓ ಸಂತೋಷ ಪಾಟೀಲ್ ಬಿರಾದಾರ ಹೇಳಿದರು.
ಪಟ್ಟಣದ ತಾಲೂಕ ಪಂಚಾಯತ ಆವರಣದಲ್ಲಿ ನೆಡದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯ ಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸಿ ಗೌರವ ಸಮರ್ಪಣೆ ಮಾಡುವ ಉದ್ದೇಶದಿಂದ ಪ್ರತಿವರ್ಷ ಅಗಸ್ಟ್ 15 ರಂದು ಈ ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತಿದೆ.
ರಾಷ್ಟ್ರದ ಏಳಿಗೆಗೆ ಪ್ರತಿಯೊಬ್ಬ ಪ್ರಜೆಯ ನಿಸ್ವಾರ್ಥ ಸೇವೆ ಅಗತ್ಯವಾಗಿದ್ದು, ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತುಕೊಂಡು ಶ್ರಮಿಸಬೇಕಿದೆ ಪ್ರತಿಯೊಬ್ಬ ನೌಕರರು ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ಮೂಲಕ ದೇಶದ ಪ್ರಗತಿಗೆ ಕೈ ಜೋಡಿಸಬೇಕಿದೆ ಎಂದರು.
ಇದೇವೇಳೆ ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಶ್ರಮಿಸಿದ ಮಹನೀಯರನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ತಾಪಂ ಕೆಡಿಪಿ ಸದಸ್ಯರಾದ ರಸುಲ್ ಸಾಬ ಧಮ್ಮೂರ, ರೇಣುಕಾ, ಗಾಯತ್ರಿ, ತಾಪಂ ಸಹಾಯಕ ನಿರ್ದೇಶಕರಾದ ಹನಮಂತಗೌಡ ಪೊಲೀಸ್ ಪಾಟೀಲ್, ವ್ಯವಸ್ಥಾಪಕರಾದ ಚಂದ್ರಶೇಖರಯ್ಯ, ಟಿಪಿಒರಾದ ಶಿವರಾಜ , ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಎಫ್.ಎಂ ಕಳ್ಳಿ, ಲೆಕ್ಕಾಧಿಕಾರಿಗಳಾದ ಹಜರತ್ ಅಲಿ, ಸೇರಿದಂತೆ ತಾಪಂ ಅಧಿಕಾರಿಗಳು, ಸಿಬ್ಬಂದಿ, ನರೇಗಾ ಯೋಜನೆಯ ಸಿಬ್ಬಂದಿಗಳು ಮತ್ತು ತಾಲೂಕು ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ ಮತ್ತು ಇತರರು ಭಾಗವಹಿಸಿದ್ದರು.