2

ಯಡ್ಡೋಣಿ ಗ್ರಾಮಕ್ಕೆ ಮೂಲಭೂತ ಸೌಕರ್ಯ ಮನವಿ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 21- ತಾಲೂಕಿನ ಗಡಿ ಭಾಗದ ಯಡ್ಡೋಣಿ ಗ್ರಾಮಕ್ಕೆ ಆಗಮಿಸಿದ್ದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು.

ಕಾಂಗ್ರೆಸ್ ಯುವ ಮುಖಂಡ ಆದೇಶ ಬಿ. ರೊಟ್ಟಿ ಮಾತನಾಡಿ, ಗ್ರಾಮದಲ್ಲಿ ಹಲವು ಮೂಲಭೂತ ಸೌಕರ್ಯಗಳ ಕೊರೆತೆ ಕಾಡುತ್ತಿದ್ದು, ಸುಮಾರು ೩ ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಹೀಗಾಗಿ ಗ್ರಾಮದಲ್ಲಿ ಯುವಕರು, ವಿದ್ಯಾವಂತರು ವರ್ಷದಿಂದ ವರ್ಷಕ್ಕೆ ಹೆಚ್ಚಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಠಿಯಿಂದಾಗಿ ಸಾರ್ವಜನಿಕರು ಗ್ರಂಥಾಲಯ ಸ್ಥಾಪಿಸಬೇಕಿದೆ. ಬುದ್ಧ ಬಸವ ಅಂಬೇಡ್ಕರ್ ಭವನ ನಿರ್ಮಾಣ, ಬಸವೇಶ್ವರ ಸಮುದಾಯ ಭವನ, ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಕ್ಕಳಿಗಾಗಿ ರಂಗ ಮಂದಿರ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಮತ್ತು ಗ್ರಾಮದ ಸರಕಾರಿ ಕೈಗಾರಿಕಾ ಕೇಂದ್ರಕ್ಕೆ ತೆರಳುವ ಕಾಂಕ್ರಿಟ್ ರಸ್ತೆ ನಿರ್ಮಿಸಲು, ಬಡವರಿಗೆ ನಿರ್ಗತಿಕರಿಗೆ ಆಸರೆ ಮನೆ ನಿರ್ಮಿಸಿಕೊಡಬೇಕಾಗಿ ಮನವಿ ಮಾಡಿದರು.

ಮನವಿ ಪತ್ರ ಸ್ವೀಕರಿಸಿದ ಶಾಸಕರು ಮಾತನಾಡಿ, ಇನ್ನೂ ಮೂರುವರೆ ವರ್ಷ ಕಾಂಗ್ರೆಸ್ ಸರಕಾರದ ಆಡಳಿತ ಅವಧಿಯಲ್ಲಿ ಸಂಪೂರ್ಣವಾಗಿ ತಾಲೂಕಿನ ಸಮಗ್ರ ಅಭಿವೃದ್ಧಿಗೊಳಿಸುವ ಮೂಲಕ ಈ ಗ್ರಾಮಕ್ಕೆ ಸವಲತ್ತು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಮುಖಂಡರಾದ ಮಹೇಶ ಹಳ್ಳಿ, ಕೆರಿಬಸಪ್ಪ ನಿಡಗುಂದಿ, ಬಸವಾಜ ಹಿರೇಮನಿ, ರುದ್ರಪ್ಪ ಮರಕಟ್ ಸೇರಿದಂತೆ ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *

error: Content is protected !!