2c136fae-be38-4577-97e1-318669006cc9

ಮಹಾತ್ಮ ಗಾಂಧೀಜಿ 155ನೇ ಜಯಂತಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 22- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರö್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ.

ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ., ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ 03 ಸಾವಿರ ರೂ., ದ್ವಿತೀಯ 02 ಸಾವಿರ ರೂ ಮತ್ತು ತೃತೀಯ 01 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ : 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ,  ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ  ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ : 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ,  ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ.

Leave a Reply

Your email address will not be published. Required fields are marked *

error: Content is protected !!