2c136fae-be38-4577-97e1-318669006cc9

27 ರಂದು ಗ್ರೂಪ್ ‘ಎ’, ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ನಿಷೇಧಾಜ್ಞೆ ಜಾರಿ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 22- ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಆ.27 ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಆ.27 ರಂದು ನಗರದ 15 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!