4

ನೆಲಜೇರಿ : ಬಾಲ್ಯ ವಿವಾಹ ನಿಷೇಧ ಅರಿವು ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 4- ಕೊಪ್ಪಳದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕುಕನೂರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ, ಪಂಚಾಯತ ರಾಜ್ ಇಲಾಖೆ, ಪೊಲೀಸ್ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಶಾಲಾ ಶಿಕ್ಷಣ ಇಲಾಖೆ, ನೆಲಜೇರಿ ಗ್ರಾಮ ಪಂಚಾಯತ್, ಮಕ್ಕಳ ಸಹಾಯವಾಣಿ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನೆಲಜೇರಿ ಗ್ರಾಮದಲ್ಲಿ ಅರಿವು ಮತ್ತು ಜಾಥಾ ಕಾರ್ಯಕ್ರಮ ನಡೆಯಿತು.

ಜಾಥಾ ಮೂಲಕ ಜಾಗೃತಿ: ಬಾಲ್ಯವಿವಾಹ ನಿಷೇಧ ಕುರಿತು ನೆಲಜೇರಿ ಗ್ರಾಮದಲ್ಲಿ ಜಾಥಾ ಮೂಲಕ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಬಾಲ್ಯ ವಿವಾಹದ ದುಷ್ಪರಿಣಾಮಗಳ ಕುರಿತು ಘೋಷ ವಾಕ್ಯ ಕೂಗಿ ವಿಶೇಷ ಜಾಗೃತಿ ಮೂಡಿಸಲಾಯಿತು. ಇದರ ಜೊತೆಗೆ ಬಾಲ್ಯವಿವಾಹ ಮಾಡುವುದಿಲ್ಲ ಹಾಗೂ ಪ್ರೋತ್ಸಾಹಿಸುವುದಿಲ್ಲ ಎಂದು ಪ್ರತಿಜ್ಞಾ ವಿಧಿ ಭೋಧನೆ ಮಾಡಲಾಯಿತು. ಸಂಬAಧಿಸಿದ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಜಾಥದಲ್ಲಿ ಪಾಲ್ಗೊಂಡಿದ್ದರು.

ಬಳಿಕ ನೆಲಜೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ್ ಚನ್ನದಾಸರ ಅವರ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ ಜರುಗಿತು. ಇದೇ ವೇಳೆ ಬಾಲ್ಯ ವಿವಾಹ, ಬಾಲ ಕಾರ್ಮಿಕತೆ, ಶಾಲೆ ಬಿಟ್ಟ ಮಕ್ಕಳ ಬಗ್ಗೆ, ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳ ಮೇಲೆ ಆಗುವ ದೌರ್ಜನ್ಯ ಹಾಗೂ ಕಿರುಕುಳ ಅವುಗಳ ದುಷ್ಪರಿಣಾಮ ಹಾಗೂ ಅಂತಹ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ತುರ್ತು ಕ್ರಮಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098/112 ಹಾಗೂ ಮಕ್ಕಳ ಕ್ಷೇತ್ರದಲ್ಲಿ ರಕ್ಷಣಾತ್ಮಕ ಬೆಂಬಲ ಕಾರ್ಯಚಟುವಟಿಕೆಗಳನ್ನು ನಿರ್ವಹಿಸುವ ಇಲಾಖೆಗಳ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರಾದ ಶೇಖರಪ್ಪ, ದುರುಗಪ್ಪ ಅಮುಲ್ ಶೆಟ್ಟಿ, ವಿಜಯಲಕ್ಷ್ಮಿ, ರಾಜಪ್ಪ ಹಾಗೂ ದುರಗಪ್ಪ ನುತಲ್ ಘಂಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಭೀಮಣ್ಣ ಬಿಡಿನಾಳ, ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ನೀಲಪ್ಪ ಗೋನಾಳ, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಸುಮಾ ಕರಿಗಾರ್, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಪರಶುರಾಮ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಸಲಹೆಗಾರರಾದ ಶಿವಲೀಲಾ ವನ್ನೂರು, ಆಪ್ತ ಸಮಾಲೋಚಕ ರವಿ ಬಡಿಗೇರಿ, ಮಕ್ಕಳ ಸಹಾಯವಾಣಿ-1098/112 ಸಿಬ್ಬಂದಿ ಶರಣಪ್ಪ ಸಿಂಗನಾಳ, ಕಾರ್ಯಕ್ರಮ ಸಂಯೋಜಕ ಬಸವರಾಜ ಗುಳೇದ್ ಸೇರಿದಂತೆ ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತದ್ದರು.

Leave a Reply

Your email address will not be published. Required fields are marked *

error: Content is protected !!