ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 4- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗಾಗಿ ಕ್ರೀಡಾಪಟು/ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಅಸಾಧಾರಣ ಪ್ರತಿಭೆಯನ್ನು ತೋರುವಲ್ಲಿ ತರಬೇತುಗೊಳಿಸಿರುವ ಜಿಲ್ಲೆಯ ತರಬೇತುದಾರರುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಹಾಗೂ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
2023ನೇ ಸಾಲಿನ ಹಿರಿಯ ಕ್ರೀಡಾಪಟು, ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು, ತರಬೇತುದಾರರುಗಳಿಂದ ಈ ಪ್ರಶಸ್ತಿಗಳಿಗಾಗಿ ಸೇವಾಸಿಂಧು ಆನ್‌ಲೈನ್ (ವೆಬ್‌ಸೈಟ್ http://sevasindhuservices.karnataka.gov.in) ಮೂಲಕ ಸೆಪ್ಟೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
