2c136fae-be38-4577-97e1-318669006cc9

ಬೆಳೆ ಹಾನಿಯಾದ ರೈತರ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಅವಕಾಶ

ಕರುನಾಡ ಬೆಳಗು ಸುದ್ದಿ

ವಿಜಯನಗರ, 6- ಮಾನ್ಯ ಸರ್ಕಾರವು 16-08-2024ರಂದು ಹೊರಡಿಸಿದ ಆದೇಶದಂತೆ ೨೦೨೪-೨೫ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ/ಅತಿವೃಷ್ಟಿಯಿಂದ ವಿಜಯನಗರ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ, ಉಪವಿಭಾಗಾಧಿಕಾರಿಗಳ, ತಹಶೀಲ್ದಾರ, ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ ೦೫ರಂದು ಪ್ರಕಟಿಸಲಾಗಿದೆ.

ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರರ ಅಥವಾ ಕೃಷಿ ಅಥವಾ ತೋಟಗಾರಿಕಾ ಇಲಾಖೆಗಳ ತಾಲೂಕಾ ಕಚೇರಿಗಳಲ್ಲಿ ೦೭ ದಿನಗಳೊಳಗಾಗಿ ಅಂದರೆ ಸೆಪ್ಟೆಂಬರ್ ೧೧ರೊಳಗಾಗಿ ಸಲ್ಲಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ (hಣಣಠಿs://viರಿಚಿಥಿಚಿಟಿಚಿgಚಿಡಿಚಿ.ಟಿiಛಿ.iಟಿ) ಅಂರ್ತಜಾಲದಲ್ಲಿ ಪರಿಶೀಲಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!