ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 6- ೨೦೨೪-೨೫ನೇ ಸಾಲಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ,) ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗಾಗಿ ವಿಜಯನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ೧ ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಕ್ಟೋಬರ್ ೩೧ ರೊಳಗಾಗಿ ಸಲ್ಲಿಸಲು ತಿಳಿಸಿದೆ.
ಅರ್ಹತೆಗಳು:ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ, ಪೋಷಕರ ಕುಟುಂಬದ ವಾರ್ಷಿಕ ಆದಾಯವು ೧ ಲಕ್ಷ ರೂಗಳನ್ನು ಮೀರಿರಬಾರದು.
ವಿಶೇಷ ಸೂಚನೆ:ಸರ್ಕಾರದ ಮಾರ್ಗ ಸೂಚಿಗಳು, ಆದೇಶಗಳನ್ವಯ ವಿದ್ಯಾರ್ಥಿವೇತನ ಪಡೆಯಲು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟ್ಲ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಞಚಿ.gov.iಟಿ/ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸುವುದು ಹಾಗೇ ಅದೇ ಅನ್‌ಲೈನ್ ಅರ್ಜಿಗಳನ್ನು ಸಂಬAಧಪಟ್ಟ ಶಾಲೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ ಎನ್‌ಪಿಸಿಐ ಮ್ಯಾಪ್ ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು., ೧ ನೇ ತರಗತಿ ವಿದ್ಯಾರ್ಥಿಗಳು ಫ್ರೆಶ್ ಎಂದು ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಕಳೆದ ವರ್ಷದಲ್ಲಿ ವಿದ್ಯಾರ್ಥಿವೇತನ ಮೂಜೂರಾದವಿದ್ಯಾರ್ಥಿಗಳ ಅರ್ಜಿಗಳನ್ನು ಆಟೋ ರಿನಿವಾಲ್ ಎಂದು ಪರಿಗಣಿಸಲಾಗುವುದರಿಂದ ಸದರಿ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಹಿಂದಿನ ವರ್ಷ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
