2c136fae-be38-4577-97e1-318669006cc9

9 ರಂದು ಹಿರಿಯ ನಾಗರಿಕರಿಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 7- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ನಿಮಿತ್ಯ ಜಿಲ್ಲೆಯ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ ೦೯ರಂದು ನಗರದ ಕೊಪ್ಪಳ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಸ್ಪರ್ಧೆಗಳ ವಿವರ : ಕ್ರೀಡಾ ಸ್ಪರ್ಧೆಗಳಲ್ಲಿ ನಡಿಗೆ, ಬಾಲ್ ಅನ್ನು ಬಕೆಟ್‌ನಲ್ಲಿ ಎಸೆಯುವುದು ಮತ್ತು ಮ್ಯೂಸಿಕಲ್ ಚೆರ್ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಏಕ ಪಾತ್ರಾಭಿನಯ, ಗಾಯನ ಸ್ಪರ್ಧೆ, ಈ ಐದು ಸ್ಪರ್ಧೆಗಳು ೬೦ ರಿಂದ ೬೯ ವರ್ಷ, 70 ವರ್ಷ ಹಾಗೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನಡೆಯಲಿವೆ.

ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ಹಿರಿಯ ನಾಗರಿಕರು ತಮ್ಮ ಹಿರಿಯ ನಾಗರಿಕರ ಗುರುತಿನ ಚೀಟಿ ಹಾಗೂ ವಯಸ್ಸಿನ ದಾಖಲೆಗಳನ್ನು ಸೆಪ್ಟೆಂಬರ್ ೦೯ರಂದು ಕಡ್ಡಾಯವಾಗಿ ತರಬೇಕು. ಜಿಲ್ಲಾಮಟ್ಟದ ಈ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತಿಯ ಹಾಗೂ ತೃತೀಯ ಸ್ಥಾನವನ್ನು ಪಡೆದವರಿಗೆ ಜಿಲ್ಲಾ ಮಟ್ಟದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು.

ಸೂಚನೆ : ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಕೊಪ್ಪಳ ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ: ೦೮೫೩೯-೨೯೫೪೯೬ ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!