2c136fae-be38-4577-97e1-318669006cc9

ಎಸ್‌ಎಸ್‌ಪಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 7- ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಯೋಜನೆಯಡಿ (ಎಸ್‌ಎಸ್‌ಪಿ) ಮೆಟ್ರಿಕ್ ಪೂರ್ವ ೧ ರಿಂದ ೮ನೇ ತರಗತಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು ಹಾಗೂ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಯ, ಪಾಲಕರ ಅಥವಾ ಪೋಷಕರ ವಾರ್ಷಿಕ ಆದಾಯ ರೂ.೧ ಲಕ್ಷ ಮೀರಬಾರದು. ೧ ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ೧ನೇ ತರಗತಿ ವಿದ್ಯಾರ್ಥಿಗಳು ಫ್ರೇಶ್ ಎಂದು ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ, ಎನ್‌ಪಿಸಿಐ ಮ್ಯಾಪ್ ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಯೋಜನಯ ಪ್ರಕ್ರಿಯಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವು ಸರ್ಕಾರದ ಆದೇಶಗಳು ಹಾಗೂ ಮಾರ್ಗ ಸೂಚಿಗಳಿಗೆ ಒಳಪಟ್ಟಿರುತ್ತದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ ೩೧ ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ವೆಬ್‌ಸೈಟ್ ಪೋರ್ಟಲ್ SSP (hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ) ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಹಾಗೂ ಕೊಪ್ಪಳ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ದೂ.ಸಂ: ೦೮೫೩೯-೨೨೫೦೭೦, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಕುಷ್ಟಗಿ ಮೊ.ಸಂ: ೮೮೬೧೬೧೦೫೭೮, ಗಂಗಾವತಿ ಮೊ.ಸಂ: ೯೯೮೬೨೪೪೪೦೮, ಯಲಬುರ್ಗಾ ಮೊ.ಸಂ: ೮೦೯೫೧೯೧೪೦೬ ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!