ಜಿಮ್ ಸ್ಥಾಪನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 10- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 224-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ನಿಗಧಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ ಕೊಪ್ಪಳ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಸೆಪ್ಟೆಂಬರ್ ೨೦ ರೊಳಗಾಗಿ ಈ ಕಚೇರಿಯಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
