2c136fae-be38-4577-97e1-318669006cc9

ಮಿಷನ್ ವಾತ್ಸಲ್ಯ ಯೋಜನೆಯಡಿ ಬಾಲಮಂದಿರ ಸಂಸ್ಥೆಗಳಿಗೆ ಅರೆಕಾಲಿಕ ಶಿಕ್ಷಕರ ನೇಮಕ : ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ಮಿಷನ್ ವಾತ್ಸಲ್ಯ ಯೋಜನೆ ಮಾರ್ಗಸೂಚಿಯಂತೆ ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲಕರ ಸರ್ಕಾರಿ ಬಾಲಮಂದಿರ ಹಾಗೂ ಬಾಲಕಿಯರ ಸರ್ಕಾರಿ ಬಾಲಮಂದಿರಗಳಲ್ಲಿನ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಯೋಗ/ದೈಹಿಕ ಶಿಕ್ಷಣ ಹಾಗೂ ಗಣಿತ, ವಿಜ್ಞಾನ ವಿಷಯಗಳಿಗೆ ಬೋಧಿಸಲು ಅಥವಾ ತರಬೇತಿ ನೀಡಲು ಅರೆಕಾಲಿಕ ಶಿಕ್ಷಕರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಾಲಕಿಯರ ಬಾಲಮಂದಿರ ಸಂಸ್ಥೆಯಲ್ಲಿ ಯೋಗ/ದೈಹಿಕ ಶಿಕ್ಷಕರ ೦೧ ಹುದ್ದೆಗೆ ಡಿಪ್ಲೋಮ್ ಇನ್ ದೈಹಿಕ ಶಿಕ್ಷಣ/ಯೋಗ, ಬಿಪಿ.ಎಡ್/ಸಿಪಿ.ಎಡ್/ಸ್ಪೆಷಲ್ ಟ್ರೈನಿಂಗ್ ಇನ್ ಯೋಗ ವಿದ್ಯಾರ್ಹತೆ ಹಾಗೂ ಕನಿಷ್ಠ ಮೂರು ವರ್ಷ ಅನುಭವವನ್ನು ಹೊಂದಿರಬೇಕು. ಬಾಲಕರ ಸರ್ಕಾರಿ ಬಾಲಮಂದಿರ ಸಂಸ್ಥೆಯಲ್ಲಿ ಗಣತಿ/ವಿಜ್ಞಾನ ಶಿಕ್ಷಕರ ೦೧ ಹುದ್ದೆಗೆ ಬಿಎಸ್‌ಸಿ, ಬಿ.ಎಡ್, ಎಮ್ ಎಸ್ಸಿ, ಬಿ.ಎಡ್ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನಿಷ್ಠ ಮೂರು ವರ್ಷ ಅನುಭವವನ್ನು ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಿಬಂಧನೆಗಳು : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ೨೧ ರಿಂದ ೩೮ ವರ್ಷದ ವಯೋಮಾನದವರಾಗಿರಬೇಕು.

ಬಾಲಕಿಯರ ಸರ್ಕಾರಿ ಬಾಲಮಂದಿರ ಸಂಸ್ಥೆಯ ಹುದ್ದೆಗೆ ಕಡ್ಡಾಯವಾಗಿ ಮಹಿಳಾ ಅಭ್ಯರ್ಥಿಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಪ್ರತಿದಿನ ನಿಗದಿತ ಸಮಯಕ್ಕೆ ಸರಿಯಾಗಿ ಸಂಬAಧಿಸಿದ ಸಂಸ್ಥೆಗಳಿಗೆ ಬಂದು ಕಡ್ಡಾಯವಾಗಿ ಅಲ್ಲಿಯೇ ಬೋಧನೆ/ತರಬೇತಿ ನೀಡಬೇಕು. ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಹಾಗೂ ವಿಶ್ವವಿದ್ಯಾಲಯಗಳಿಂದ ಸಂಬAಧಿಸಿದ ತರಬೇತಿ/ಪದವಿ ಪಡೆದಿರಬೇಕು. ಅಭ್ಯರ್ಥಿಗಳು ೨೦೨೪-೨೫ನೇ ಸಾಲಿನಲ್ಲಿ ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಅರೆಕಾಲಿಕ ಸಂಚಿತ ಗೌರವಧನದ ಅಧಾರದ ಮೇಲೆ ಸೇವೆ/ಕಾರ್ಯ ನಿರ್ವಹಿಸಬೇಕಾಗಿರುತ್ತದೆ. ಈ ಹುದ್ದೆಗಳು ಅರೆಕಾಲಿಕ ಹಾಗೂ ತಾತ್ಕಾಲಿಕ ಆಧಾರದ ಹುದ್ದೆಯಾಗಿದ್ದು, ಯಾವುದೇ ಕಾರಣಕ್ಕೂ ಖಾಯಂಗೊಳಿಸುವ, ಮುಂದುವರೆಸುವ ಪ್ರಮೇಯವಿರುವುದಿಲ್ಲ. ಸಿಬ್ಬಂದಿಗಳ ಸೇವೆಯು ಪ್ರಧಾನ ಕಚೇರಿ ನಿರ್ದೇಶನ ಆದೇಶದಂತೆ ಮತ್ತು ಅನುದಾನದ ಲಭ್ಯತೆಯ ಆಧಾರದ ಮೇಲೆ ನಿರ್ವಹಿಸಲ್ಪಡುತ್ತದೆ. ಅನುದಾನದ ಲಭ್ಯತೆಗನುಗುಣವಾಗಿ ಗೌರವಧನದ ಆಧಾರದ ಮೇಲೆ ಪಾವತಿಸಲು ಕ್ರಮವಹಿಸಲಾಗುತ್ತದೆ. ಸೇವೆ ತೃಪ್ತಿಕರವಿಲ್ಲವೆಂದು ಕಂಡುಬAದಲ್ಲಿ ಯಾವುದೇ ಸಂದರ್ಭದಲ್ಲಿ ತೆಗೆದುಹಾಕಲಾಗುವುದು. ಸ್ಥಳೀಯ ಅಭ್ಯರ್ಥಿಗಳಿಗೆ ಹಾಗೂ ಹೆಚ್ಚಿನ ಶೈಕ್ಷಣಿಕ ಅರ್ಹತೆ ಮತ್ತು ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಪೊಲೀಸ್ ಪರಿಶೀಲನಾ ವರದಿ ಸಲ್ಲಿಸಬೇಕು.ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ ೨೦ ಸಂಜೆ ೫ ಗಂಟೆಯೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಅಪೂರ್ಣ ಹಾಗೂ ವಿಳಂಬವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: ೦೮೫೩೯-೨೨೫೦೩೦ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!