ವಕ್ಫ್ ತಿದ್ದುಪಡಿ ಜಾತ್ಯಾತೀತ ಮೌಲ್ಯಗಳ ವಿರುದ್ಧವಾಗಿದೆ : ಹೈದರ್ ಅಲಿ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 13- ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ನರೇದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ವಕ್ಫ್ ಬಿಲ್ ೨೦೨೪ ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿರುತ್ತದೆ ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಹಿಡನ್ ಅಜೆಂಡವಾಗಿರುತ್ತದೆ ಎಂದು ಎಸ್‌ಡಿಪಿಐ ಅಗ್ರಹಿಸಿದೆ.
SಆPI ಜಿಲ್ಲಾಧ್ಯಕ್ಷ ಹೈದರ್ ಅಲಿ ಮಾತನಾಡಿ ಹಾಲಿಯಿರುವ ವಕ್ಫ್ ಕಾಯ್ದೆಗೆ ಸರಿಸುಮಾರು ೪೦ ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಫ್ ಕಾಯ್ದೆಯನ್ನೇ ನಾಶಗೊಳಿಸಲು ಈ ವಕ್ಫ್ ಬಿಲ್ – ೨೦೨೪ ತಂದಿರುವುದು, ಇದು ಜಾತ್ಯಾತೀತ ಮೌಲ್ಯಗಳ ವಿರುದ್ಧವಾಗಿದೆ ಹಾಗೂ ತಾರತಾಮ್ಯಗಳೊಂದಿಗೆ ಕೂಡಿದೆ ಅದುದರಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಈ ಬಿಲ್ ವಿರುದ್ಧ ತನ್ನ ವಿರೋಧ ವ್ಯಕ್ತಪಡಿಸುತ್ತದೆ ಎಂದರು.
ವಕ್ಫ್ ತಿದ್ದುಪಡಿ ಬಿಲ್‌ಗೆ ಸಂಬAಧಿಸಿದAತೆ ಈ ಕೆಳಗಿನ ಆಕ್ಷೇಪಣೆಗಳನ್ನು ಸಲ್ಲಿಸಲಾಗಿದೆ, ನ್ಯಾಯ ಮಂಡಳಿಯು ನ್ಯಾಯಾಂಗ ವ್ಯವಸ್ಥೆಯ ಸಂಸ್ಥೆಯಾಗಿದ್ದು, ಸದರಿ ವಕ್ಫ್ ಬಿಲ್ ಮಸೂದೆಯು ನ್ಯಾಯಾಂಗ ಮಂಡಳಿಯ ಅಧಿಕಾರವನ್ನು ಕಸಿದುಕೊಳ್ಳುತ್ತದೆ, ಇದು ಸಾಮಾನ್ಯ ಕಾನೂನು ನಿಯಮಕ್ಕೆ ವಿರುದ್ಧವಾಗಿದೆ ಮತ್ತು ಕಾನೂನು ಉಲ್ಲಂಘನೆಯಾಗಿದೆ.
ಹಿAದೂಗಳಲ್ಲದ ಬೌದ್ಧರು, ಜೈನರು ಮತ್ತು ಸಿಖ್ಖರು ಇವರಿಗೂ ಸಹ ದೇವಸ್ಥಾನದ ಆಡಳಿತದ ಸದಸ್ಯತ್ವವನ್ನು ನಿಷೇಧಿಸಿರುವುದರಿಂದ ಹಿಂದೂಗಳಿಗೆ ವಕ್ಫ್ ಮಂಡಳಿಯ ಸದಸ್ಯರಾಗಿ ಜವಾಬ್ದಾರಿ ನೀಡುವುದು ಸಂಪೂರ್ಣ ತಾರತಮ್ಯದಿಂದ ಕೂಡಿದೆ, ವಕ್ಫ್ ಅಧಿಕಾರ ವ್ಯಾಪ್ತಿಯಿಂದ ಶತ್ರುಗಳ ಆಸ್ತಿಗಳೆಂದು ಪರಿಗಣಿಸಿ ಸದರಿ ಆಸ್ತಿಗಳನ್ನು ವಕ್ಫ್ ನಿಯಂತ್ರಣದಿಂದ ಹೊರಗಿಡುವುದು ದೊಡ್ಡ ಪ್ರಮಾಣದ ಹಾನಿಯನ್ನು ಉಂಟುಮಾಡುತ್ತದೆ ಎಂದರು.
ಭೂ ಪರಿವರ್ತನೆಗೆ ನೀಡಿರುವ ೯೦ ದಿನಗಳ ಅವಧಿಯನ್ನು ವಕ್ಫ್ ಭೂಮಿಯ ಅಗಾಧತೆಯ ದೃಷ್ಟಿಕೋನದಲ್ಲಿ ಹೇಳುವುದಾದರೆ, ಅದು ತೀರಾ ಸಾಕಾಗದು, ನಾವು ಅರಿಕೆ ಮಾಡುವುದೇನೆಂದರೆ, ವಕ್ಫ್ ಕಾನೂನಿನ ಉದ್ದೇಶವು ವಕ್ಸ್ ಭೂಮಿಯ ರಕ್ಷಣೆ ಎಂದಾಗಿರುವಾಗ, ಈ ದುರುದ್ದೇಶಿತ ಮಸೂದೆಯು ಮುಸಲ್ಮಾನರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಸಾಲು ಸಾಲು ಕಾನೂನುಗಳ ಸಂದೇಶವನ್ನು ಸಾರುತ್ತಿದೆ ಹಾಗೂ ಮುಸಲ್ಮಾನರು ಕೆಳ ದರ್ಜೆಯವರು ಎಂದು ಬಿಂಬಿಸಿ, ಅವರ ಮೇಲೆ ವಿವಿಧ ಅಸಮಾನ ಕಾನೂನುಗಳನ್ನು ಹೇರಲಾಗುತ್ತಿದೆ ಎಂದು ಪ್ರತಿಭಟಿಸಿದರು.
ಈ ಬಗ್ಗೆ ಜಂಟಿ ಸಮಿತಿಯು ಸಕಾಲಿಕ ಮುಂಜಾಗರೂಕತೆಯನ್ನು ಪಾಲಿಸಿ, ಸಮಾಜದ ಹಾಗೂ ದೇಶದ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿ ಗೌರವಾನ್ವಿತ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರು, ಜಂಟಿ ಸಂಸದೀಯ ಸಮಿತಿ, ನವದೆಹಲಿ ಇವರಿಗೆ ಆಕ್ಷೇಪಣೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹೈದರ ಅಲಿ ಜಿಲ್ಲಾಧ್ಯಕ್ಷರು,ಸಲೀಂ ಪ್ರಧಾನ ಕಾರ್ಯದರ್ಶಿ, ಅಬೂಬಕ್ಕರ್ ಕಾರ್ಯದರ್ಶಿ, ಶಕೀಲ್ ಬಾಷಾ ಕಾರ್ಯದರ್ಶಿ, ಅನ್ವರ್ ಬಾಷಾ ಸದಸ್ಯರು ಸೇರಿದಂತೆ ಉಪಸ್ಥಿತರಿದ್ದರು.
