4

ಕೆಕೆಆರ್‌ಡಿಬಿಯಿಂದ ಈ ಭಾಗದ ಅಭಿವೃದ್ಧಿ ಸಾಧ್ಯ : ಸಂತೋಷ ಪಾಟೀಲ್

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 17- ಕಲ್ಯಾಣ ಕರ್ನಾಟಕ ಸ್ವಾತಂತ್ರ‍್ಯಗೋಸ್ಕರ ಹೋರಾಡಿದ ಮಹನೀಯರನ್ನು ಎಲ್ಲರೂ ಸ್ಮರಿಸಬೇಕು ಮತ್ತು ನಮನಗಳು ಹಾಗೂ ನಮ್ಮ ಭಾಗ ಅಭಿವೃದ್ಧಿಯಾಗಬೇಕಾದರೆ ಕೆಕೆಆರ್‌ಡಿಬಿಯಿಂದ ಮಾತ್ರ ಸಾಧ್ಯ ಎಂದು ತಾಲೂಕು ಪಂಚಾಯತ್ ಇಓ ಸಂತೋಷ ಪಾಟೀಲ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕರೂ ಕೂಡ ನಮ್ಮ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ‍್ಯ ಭಾಗ್ಯ ಸಿಕ್ಕಿರಲಿಲ್ಲ ಆ ಸಂದರ್ಭದಲ್ಲಿ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾದ ದೇಶದ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಪೋಲೊ ಆಪರೇಷನ್ ಮೂಲಕ ಹೈದರಾಬಾದ್ ನಿಜಾಮನ ಸಾರ್ವಭೌಮತ್ವವನ್ನು ವಿರೋಧಿಸಿ ನಿಜಾಮನ ಸಂಸ್ಥಾನವನ್ನು ೧೭ ನೇ ಸೆಪ್ಟೆಂಬರ್ ೧೯೪೮ ರಂದು ಭಾರತ ಒಕ್ಕೂಟಕ್ಕೆ ಸೇರಿಸಿದ ಕೀರ್ತಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರಿಗೆ ಸಲ್ಲುತ್ತದೆ ಎಂದರು.

ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದ ಕಾರಣ ೩೭೧ ಜೆ ಅನ್ವಯ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಶಿಕ್ಷಣ, ಆರೋಗ್ಯದ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದ್ದು ಸರ್ಕಾರದ ಪ್ರತಿನಿಧಿಗಳಾದ ನಾವುಗಳು ಅಭಿವೃದ್ಧಿ ಕಾರ್ಯಗಳ ಜೊತೆ ಆರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಮಾಡಬೇಕೆಂದು ತಿಳಿಸಿದರು.

ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಇನ್ನು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾನ್ಯ ಶಾಸಕರು ಕೈಗೊಳ್ಳುತ್ತಿದ್ದಾರೆ. ಕೆಕೆಆರ್ ಡಿಬಿಯಿಂದ ಈ ಭಾಗದ ಅಭಿವೃದ್ಧಿ ಸಾಧ್ಯವಾಗಲಿದೆ. ಅದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಪಂ ಸಹಾಯಕ ನಿರ್ದೇಶಕರಾದ ಹನುಮಂತಗೌಡ ಪೊಲೀಸ್ ಪಾಟೀಲ್,ಅಕ್ಷರ ದಾಸೋಹ ಎಡಿ ಟಿ.ಜೆ ಧಾನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಐಸಿಜೆ ಸಂಯೋಜಕ ಶರಣಪ್ಪ ಹಾಳಕೇರಿ, ತಾ.ಪಂ ನಾಮನಿರ್ದೇಶಕ ಸದಸ್ಯರಾದ ರಸಲಸಾಬ್ ದಮ್ಮೂರ, ಕಳಕಪ್ಪ ಕುರಿ, ತಾ.ಪಂ ಲೆಕ್ಕ ಸಹಾಯಕ ಹಜರತ್, ಮುಖ್ಯಸ್ಥ ಚಂದ್ರಶೇಕರಯ್ಯ ಹಾಗೂ ತಾಲೂಕ ಪಂಚಾಯತಿ ಸಿಬ್ಬಂದಿಗಳು ಮತ್ತು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!