
ಶಾಲಾ ಶಿಕ್ಷಣ ಇಲಾಖೆಯ ಕಲಿಕಾಸರೆ ಪುಸ್ತಕ ಬಿಡುಗಡೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 18- ಜಿಲ್ಲಾಡಳಿತದಿಂದ ಸೆ.೧೭ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ೭೭ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಕಲಿಕಾಸರೆ ಪುಸ್ತಕವನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಹೇಮಲತಾ ನಾಯಕ ಅವರು ಬಿಡುಗಡೆ ಮಾಡಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಲಬುರಗಿ ಅವರ ‘ಅಕ್ಷರ ಆವಿಷ್ಕಾರ’ ಯೋಜನೆಯಡಿ, ಅಪರ ಆಯುಕ್ತರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ಅವರ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಸಾಮರ್ಥ್ಯಾಭಿವೃದ್ಧಿ ಅಭ್ಯಾಸ ಪುಸ್ತಕವನ್ನು ಕೊಪ್ಪಳ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯಿಂದ ರಚಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಶೈಲ ಬಿರಾದಾರ, ಶಿಕ್ಷಣ ಇಲಾಖೆಯ ಅಯ್ಯನಗೌಡರ, ವಿಜಯಕುಮಾರ ಹಾಗೂ ಇನ್ನೀತರರು ಇದ್ದರು.