
ಹಗರಿಬೊಮ್ಮನಹಳ್ಳಿ : ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಡಿಸಿ ಭೇಟಿ
ಕರುನಾಡ ಬೆಳಗು ಸುದ್ದಿ
ವಿಜಯನಗರ, 20- ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ ಭೇಟಿ ನೀಡಿ, ಪರಿಶೀಲಿಸಿದರು.
ಆಸ್ಪತ್ರೆಯ ರೋಗಿಗಳೊಂದಿಗೆ ಚಿಕಿತ್ಸೆ ಮತ್ತು ಇತರೆ ಸೌಲಭ್ಯಗಳ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ವೈದ್ಯರು ಸರಿಯಾದ ಸಮಯಕ್ಕೆ ಬರುತ್ತಾರೆಯೇ ಮತ್ತು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆಯೇ ಎಂಬುದರ ಬಗ್ಗೆ ರೋಗಿಗಳು ಹಾಗೂ ಅವರು ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಆಸ್ಪತ್ರೆಯ ಹೊರ ರೋಗಿಗಳ ಕೌಂಟರ್‌ನಲ್ಲಿ ಹೆಚ್ಚಿನ ಜನರು ಸರತಿ ಸಾಲಿನಲ್ಲಿ ನಿಂತಿರುವುದನ್ನು ಗಮನಿಸಿ, ಈ ಕೌಂಟರನ್ನು ಆಸ್ಪತ್ರೆಯ ಹಿಂಬಾಗಕ್ಕೆ ಸ್ಥಳಾಂತರಿಸುವಂತೆ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಸೂಚಿಸಿ, ಆಸ್ಪತ್ರೆಯಲ್ಲಿ ಎಲ್ಲಾ ತರಹದ ಔಷಧಗಳು ಇರುವಂತೆ ನೋಡಿಕೊಂಡು, ಯಾವುದೇ ರೀತಿಯ ಹೊರಗಡೆ ಔಷಧಿ ಖರೀದಿಗಾಗಿ ಚೀಟಿಗಳನ್ನು ಬರೆಯದಂತೆ ಕ್ರಮ ವಹಿಸಿ ಎಂದರು.
ಇದೇ ವೇಳೆ ಆಸ್ಪತ್ರೆ ಹಾಗೂ ಆವರಣವನ್ನು ಸ್ವಚ್ಚವಾಗಿಟ್ಟಿರುವುದಕ್ಕೆ ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿರರು.
ಈ ಸಂದರ್ಭದಲ್ಲಿ ಹಗರಿಬೊಮ್ಮನಹಳ್ಳಿ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮತ್ತಿತರರಿದ್ದರು.