WhatsApp Image 2024-09-19 at 9.12.05 AM

ಯುವಜನೋತ್ಸವ-2024 : ಹೆಚ್‌ಐವಿ ಏಡ್ಸ್ ನಿಯಂತ್ರಣ ಜಾಗೃತಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 20- ಯುವಜನೋತ್ಸವ-2024ರ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಹೆಚ್ಐವಿ ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರ ಆಂದೋಲನದ ನಿಮಿತ್ಯ ಅಂತರ್ ಪದವಿ ಕಾಲೇಜ್ 18 ರಿಂದ 25 ವರ್ಷದೊಳಗಿನ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಕಬಡ್ಡಿ ಪಂದ್ಯಾವಳಿಯು ತಾಲೂಕಾ ಕ್ರೀಡಾಂಗಣದಲ್ಲಿ ಸೆ.20ರಂದು ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಅವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಹೆಚ್ಐವಿ ಏಡ್ಸ್ ರೋಗಿಗಳ ಸಂಖ್ಯೆಯನ್ನು ಸೊನ್ನೆಗೆ ತರಲು ಸರ್ಕಾರ ಹಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಯುವ ಸಮುದಾಯಕ್ಕೆ ಅರಿವು ಮೂಡಿಸಲಾಗುತ್ತಿದೆ. ಹೆಚ್ಐವಿ ಖಾಯಿಲೆ ಮುಖ್ಯವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕದಿAದ, ಸಂಸ್ಕರಿಸದ ಸೂಜಿ ಮತ್ತು ಸಿರಂಜಿಗಳಿ0ದ, ರಕ್ತ ಪರೀಕ್ಷೆ ಮಾಡದೇ ರಕ್ತ ಪಡೆಯುವುದರಿಂದ ಹಾಗೂ ಸೋಂಕಿತ ತಂದೆ-ತಾಯಿ0ದ ಮಗುವಿಗೆ ಹರಡುತ್ತದೆ. ಹೆಚ್ಚಾಗಿ 15 ರಿಂದ 29 ವರ್ಷದೊಳಗಿನ ಯುವಕರೇ ಈ ಖಾಯಿಲೆಗೆ ಬಲಿಯಾಗುತ್ತಿದ್ದಾರೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರ ಕೈಗೊಂಡು ಪ್ರತಿಯೊಬ್ಬರಿಂಗೂ ಹೆಚ್.ಐ.ವಿ ಏಡ್ಸ್ ಹರಡದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಜಿಲ್ಲೆಯ ಎಲ್ಲಾ ಯುವಕರು ಹೆಚ್.ಐ.ವಿ ಏಡ್ಸ್ ಬಗ್ಗೆ ಅರಿವು ಹೊಂದಬೇಕು ಎಂದರು.

ಪುರುಷ ಮತ್ತು ಮಹಿಳಾ ಕಬಡ್ಡಿ ತಂಡದ ಸದಸ್ಯರು ಬಹಳಷ್ಟು ಉತ್ಸಾಹದಿಂದ ಈ ಕ್ರೀಡಾಕೂಟದಲ್ಲಿ ಭಾಗಿಯಾಗಿರುವುದು ಅಭಿನಂದನಾರ್ಹ ಸಂಗತಿಯಾಗಿದೆ. ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಕೊಪ್ಪಳ ಜಿಲ್ಲೆಯನ್ನು ಹೆಚ್.ಐ.ವಿ ಏಡ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಖಾಯಿಲೆಯ ಬಗ್ಗೆ ತಿಳಿದುಕೊಂಡು ತಮ್ಮ ತಮ್ಮ ಹಳ್ಳಿಗಳಲ್ಲಿ ಮತ್ತು ನಗರ ಪ್ರದೇಶದ ವಿವಿಧೆಡೆ ಅರಿವು ಮೂಡಿಸಿ, ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡಲು ಕೈ ಜೊಡಿಸುವಂತೆ ಯುವಕರಿಗೆ ಸಲಹೆ ಮಾಡಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಶಶಿಧರ ಎ ಮಾತನಾಡಿ, ಹೆಚ್ಐವಿ ಏಡ್ಸ್ ರೋಗ ತಡೆಗಟ್ಟಲು ನಮ್ಮ ಜಿಲ್ಲೆಯಲ್ಲಿ ಈಗಾಗಲೇ ಶಾಲಾ ಕಾಲೇಜುಗಳಲ್ಲಿ, ಸಮುದಾಯದಲ್ಲಿ ನಿರಂತರವಾಗಿ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿ0ದ ಜಾಗೃತಿ ಮೂಡಿಸಲಾಗುತ್ತಿದೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮ, ಕಾಲೇಜು ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಸ್ಪರ್ಧೆ ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಗಿದೆ.

ಹೆಚ್ಐವಿ ಸೋಂಕಿತರನ್ನು ಗೌರವದಿಂದ ಕಾಣಬೇಕು ಅವರಿಗೂ ಕೂಡ ಬದುಕುವ ಹಕ್ಕಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಇತರರಿಗೂ ತಿಳಿಸಬೇಕೆಂದು ಹೇಳಿದರು. ಇದಕ್ಕೆ ಯಾವುದೇ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ತಿಳುವಳಿಕೆಯೇ ಒಂದು ಔಷಧಿಯಾಗಿದೆ. ಎಲ್ಲರೂ ಜಾಗೃತರಿಂದ ಇರಬೇಕು.

ಈ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಸಿಲ್ಡ್(ಕಪ್ಪು) ವಿತರಣೆ ಮಾಡಲಾಗುವುದೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಪ್ರಕಾಶ ವಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳಾದ ಡಾ.ಪ್ರಕಾಶ ಹೆಚ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಜಿಲ್ಲಾ ಹೆಚ್.ಐ.ವಿ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮೇಲ್ವಿಚಾರಕಾರದ ಮಾಹಾಂತೇಶ, ದೈಹಿಕ ಶಿಕ್ಷಣಾಧಿಕಾರಿಗಳು, ಉಪನ್ಯಾಸಕರು, ಆಪ್ತಸಮಾಲೋಚಕರು, ಎನ್.ಜಿ.ಓ ಪ್ರತಿನಿಧಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಆಪ್ತ ಸಮಾಲೋಚಕರಾದ ಅಂಬರೇಶ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!