5

ಗ್ರಾಮ ಆಡಳಿತ ನೌಕರರ ಸಂಘದಿ0ದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 26- ಗ್ರಾಮ ಆಡಳಿತ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಕೊಡುವಂತೆ ಒತ್ತಾಯಸಿ ನಗರದ ತಹಶೀಲ್ದಾರರ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಕಂದಾಯ ಇಲಾಖೆಯ ವತಿಯಿಂದ ನೀಡಲಾಗುವ ಸೌಲಭ್ಯಗಳನ್ನು ೨೧ ತಂತ್ರಾಶಗಳನ್ನು ದಾಖಲು ಮಾಡಲು ಯಾವುದೇ ಸೌಲಭ್ಯ ನೀಡದಿರುವುದು, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಉವ ಬಗ್ಗೆ, ಸೇವಾ ವಿಷಯಗಳಿಗೆ ಸಂಬ0ಧಿಸಿದ0ತೆ ಸೌಲಭ್ಯಗಳನ್ನು ಕಲ್ಪಿಸಿ ಕೊಡುವುದು, ಪ್ರೋಟೋಕಲಾ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡುವುದು, ಮುಟ್ಯೇಷನ ಅವಧಿಯನ್ನು ವಿಸ್ತರಣೆ ಮಾಡುವುದು, ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಮಾಡಿದರು.

ಈ ಸಮಯದಲ್ಲಿ ಗ್ರಾಮ ಆಡಳಿತ ಸಂಘದ ಜಿಲ್ಲಾಧ್ಯಕ್ಷ ಮಹ್ಮದ ಆಸೀಪ್‌ಅಲಿ, ಉಪಾಧ್ಯಕ್ಷ ಬಸವರಾಜ ಲಂಬಾಣಿ, ತಾಲೂಕ ಅಧ್ಯಕ್ಷ ಗಂಗಾಧರ ಹಳ್ಳಿ, ಕಂದಾಯ ಇಲಾಖೆಯ ನೌಕರರ ಸಂಘ ಜಿಲ್ಲಾಧ್ಯಕ್ಷ ಮಂಜುನಾಥ ಮ್ಯಾಗಳಮನಿ, ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!