
ಬಳ್ಳಾರಿ : ಜಿಲ್ಲಾಪಂಚಾಯತ್ ಕಚೇರಿ ಆವರಣದಲ್ಲಿ ಸ್ವಚ್ಛತಾ ಶ್ರಮದಾನ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 2- ಮಹಾತ್ಮ ಗಾಂಧಿಜೀಯವರ ಜಯಂತಿ ಹಾಗೂ ಸ್ವಚ್ಛಾತಾ ಹೀ ಸೇವಾ ಅಂಗವಾಗಿ ಬಳ್ಳಾರಿ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದ ಇವರ ನೇತೃತ್ವದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಮುಖ್ಯಯೋಜನಾಧಿಕಾರಿ ವಾಗೀಶ್ ಶಿವಕುಮಾರ್ ಸೇರಿದಂತೆ ಯೋಜನಾ ನಿರ್ದೇಶಕರು, ಮುಖ್ಯ ಲೆಕ್ಕಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಚೇರಿಯ ಎಲ್ಲಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.