ವಿಜಯನಗರ : ಸಹಕಾರ ಸಚಿವರ ಪ್ರವಾಸ
ಕರುನಾಡ ಬೆಳಗು ಸುದ್ದಿ
ವಿಜಯನಗರ, 3- ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಅಕ್ಟೋಬರ್ ೦೪, ಅ.೦೫ ಮತ್ತು ಅ.೦೬ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಕ್ಟೋಬರ್ ೦೪ರಂದು ಗದಗ ಜಿಲ್ಲೆಯ ರೋಣಾ ತಾಲ್ಲೂಕಿನ ಅಬ್ಬಿಗೇರಿಯಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ ಸಂಜೆ ೦೫.೩೦ಕ್ಕೆ ಹೊಸಪೇಟೆಗೆ ಆಗಮಿಸಿ ವಾಸ್ತವ್ಯ ಹೂಡುವರು.
ಅ.೦೫ರಂದು ಬೆಳಿಗ್ಗೆ ೧೦.೩೦ಕ್ಕೆ ಹೊಸಪೇಟೆ ನಗರದಲ್ಲಿರುವ ಬಳ್ಳಾರಿ ಡಿ.ಸಿ.ಸಿ ಬ್ಯಾಂಕ್‌ನ ಕೆಲಸ ಕಾರ್ಯಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಮಧ್ಯಾಹ್ನ ೧೨.೩೦ಕ್ಕೆ ಬಳ್ಳಾರಿ ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ರೈತರ ಕ್ಷೇಮಾಭಿವೃದ್ಧಿ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಬಳಿಕ ಅಂದು ಹೊಸಪೇಟೆಯಲ್ಲಿ ವಾಸ್ತವ್ಯ ಮಾಡುವರು.
ಅ.೦೬ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಹೊಸಪೇಟೆ ತಾಲ್ಲೂಕಿನ ನಾಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯುವ ನಾಗೇನಹಳ್ಳಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಅಂದು ಮಧ್ಯಾಹ್ನ ೦೨.೩೦ಕ್ಕೆ ಹೊಸಪೇಟೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
