
ನೇಕಾರ ಸಮ್ಮಾನ ಯೋಜನೆಯಡಿ ಅರ್ಜಿ ಅಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 3- ಕೈ ಮಗ್ಗ ಮತ್ತು ಜವಳಿ ಇಲಾಖೆಯಿಂದ ೨೦೨೪-೨೫ನೇ ಸಾಲಿಗೆ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರಿಗೆ ಹಾಗೂ ಮಗ್ಗ ಪೂರ್ವ ಘಟಕಗಳ ನೇಕಾರರು ಮತ್ತು ಕಾರ್ಮಿಕರಿಗೆ ನೇಕಾರ ಸಮ್ಮಾನ ಯೋಜನೆಯ ನೆರವು ನೀಡಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ.
ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರಿಗೆ ವಾರ್ಷಿಕ ೫೦೦೦ ರೂಪಾಯಿಗಳನ್ನು ಆರ್ಥಿಕ ನೆರವು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿ ಅಪ್ ಲೋಡ್ ಮಾಡಲು ಅರ್ಜಿ ಆಹ್ವಾನಿಸಿದ್ದು, ಘಟಕಗಳ ಮಾಲೀಕರು, ನೇಕಾರರು, ಹಾಗೂ ಕಾರ್ಮಿಕರು ಕೊಪ್ಪಳದ ಅಶೋಕ ಸರ್ಕಲ್ ಹತ್ತಿರವಿರುವ ಕೈಮಗ್ಗ ಮತ್ತು ಜವಳಿ ಇಲಾಖೆ, ಕಾರ್ಮಿಕರು ಉಪ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಭರ್ತಿ ಮಾಡಿ ದಾಖಲೆಗಳೊಂದಿಗೆ ಅಕ್ಟೋಬರ್ ೧೦ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ ೦೮೫೩೯-೨೯೫೪೬೯ಗೆ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.