ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ 19- ಅಳವಂಡಿಯ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಕಂಪ್ಯೂಟರ್ ವಿಷಯದ (ಬಿಎಸ್ಸಿ/ಎಂಎಸ್ಸಿ ಕಂಪ್ಯೂಟರ್/ಬಿಸಿಎ/ಬಿಇ ಕಂಪ್ಯೂಟರ್ ಸಾಯಿನ್ಸ್) ಅತಿಥಿ ಶಿಕ್ಷಕರ (ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು) ಹುದ್ದೆಗೆ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿಯನ್ನು ಮೆರಿಟ್ ಆಧಾರದ ಮೇಲೆ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 27., ಅರ್ಜಿ ಸಲ್ಲಿಸುವ ಸ್ಥಳ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಅಳವಂಡಿ ತಾ ಕೊಪ್ಪಳ. ಹೆಚ್ಚಿನ ಮಾಹಿತಿಗೆ ಮೊ.ಸಂ:7019187210 ಗೆ ಸಂಪರ್ಕಿಸಬಹುದಾಗಿದೆ ಎಂದು ವಸತಿ ಶಾಲೆಯ ಪ್ರಕಟಣೆ ತಿಳಿಸಿದೆ.