KB

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 8- ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಮಾರೆಪ್ಪ ಸೋಂಪುರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ವು ಆರೋಪಿಗೆ ಶಿಕ್ಷೆ ವಿಧಿಸಿದೆ.

2016 ರ ಜನವರಿ 01 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಯರಡೋಣ ಗ್ರಾಮದ ಸರ್ಕಾರಿ ಶಾಲೆ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯು ಬಹಿರ್ದೆಸೆಗೆಂದು ಹೋದಾಗ ಆರೋಪಿ ಮಾರೆಪ್ಪ ಸೋಂಪುರ ಇತನು ಹಿಂಬಾಲಿಸಿ ಅವಳ ಇಚ್ಛೆಗೆ ವಿರುದ್ಧವಾಗಿ ಬಲವಂತದ ಅತ್ಯಾಚಾರ ಮಾಡಿದ್ದು, ನಂತರದಲ್ಲಿ ಅದೇ ಜಾಗದಲ್ಲಿ ಸುಮಾರು 7 ರಿಂದ 8 ಬಾರಿ ಬಾಲಕಿಗೆ ಬಲವಂತದ ಅತ್ಯಾಚಾರ ಮಾಡಿ, ಈ ವಿಷಯದ ಕುರಿತು ಯಾರ ಮುಂದೆ ಹೇಳಿದರೆ ಸಾಯಿಸುವುದಾಗಿ ಕೊಲೆ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕಾರಟಗಿ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಪ್ಪ ಅವರು ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆಯನ್ನು ಪ್ರಭಾಕರ ಧರ್ಮಟ್ಟಿ, ಕಾಳಿ ಕೃಷ್ಣ ಹಾಗೂ ಗಂಗಾವತಿ ಗ್ರಾಮೀಣ ವೃತ್ತ ಪೊಲೀಸ್ ಅಧಿಕಾರಿಗಳಾದ ದೀಪಕ ಆರ್.ಬೂಸರೆಡ್ಡಿ ಅವರು ನಿರ್ವಹಿಸಿದ್ದರು. ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಭಿತಾಗಿದ್ದರಿಂದ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವು ಸ್ಪೇ.ಎಸ್‌ಸಿ (ಪೋಕ್ಸೊ) ಸಂ: 03/2017 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿ ಮಾರೆಪ್ಪ ಸೋಂಪುರ ಇತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 20,000 ಗಳ ದಂಡವನ್ನುಭರಿಸುವ0ತೆ ಆದೇಶಿಸಿ, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ (ಪೋಕ್ಸೊ) ಕುಮಾರ ಡಿ.ಕೆ ಅವರು 2024 ರ ಸೆಪ್ಟೆಂಬರ್ 18 ರಂದು ತೀರ್ಪು ಹೊರಡಿಸಿರುತ್ತಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮದೇಸಾಯಿ ಅವರು ಈ ಪ್ರಕರಣ ನಡೆಸಿ ವಾದ ಮಂಡಿಸಿದ್ದರು. ಹಾಗೂ ವಿಚಾರಣಾ ಕಾಲಕ್ಕೆ ಪೋಲಿಸ್ ಸಿಬ್ಬಂದಿ ಅಕ್ಬರ್ ಸಮಯಕ್ಕೆ ಸರಿಯಾಗಿ ಸಾಕ್ಷಿದಾರರನ್ನು ಹಾಜರುಪಡಿಸಿ ಸಹಕರಿಸುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!