ನರೇಗಾ ಯೋಜನೆ ಸೌಲಭ್ಯ ಪಡೆಯಲು ಬೇಡಿಕೆ ಸಲ್ಲಿಸಿ : ಸಚಿವ ತಂಗಡಗಿ
ಕರುನಾಡ ಬೆಳಗು ಸುದ್ದಿ
ಗ0ಗಾವತಿ, 8- ನರೇಗಾ ಕ್ರಿಯಾಯೋಜನೆ ತಯಾರಿಸುತ್ತಿದ್ದು, ಫಲಾನುಭವಿಗಳು ಬೇಡಿಕೆ ಪಟ್ಟಿ ನೀಡಿ ಸೌಲಭ್ಯ ಪಡೆದುಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.
ತಾಲೂಕಿನ ಹಳೇ ಅಯೋಧ್ಯ ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ೨೦೨೫-೨೬ನೇ ಸಾಲಿನ ರ‍್ಮಿಕ ಆಯವ್ಯಯ ತಯಾರಿಸಲು ರ‍್ಮಿಕರಿಂದ ಬೇಡಿಕೆ ಪಡೆಯಲಾಗುತ್ತಿದೆ. ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಸಲ್ಲಿಸಬಹುದು.
ಗ್ರಾಮೀಣ ಭಾಗದ ರ‍್ವತೋಮುಖ ಅಭಿವೃದ್ಧಿಗೆ ನರೇಗಾ ಯೋಜನೆ ನೆರವಾಗಿದೆ. ಕೂಲಿಕಾರರಿಗೆ ಕೆಲಸ ನೀಡುವುದರ ಜೊತೆಗೆ ಗ್ರಾಮೀಣ ಭಾಗದಲ್ಲಿ ಆಸ್ತಿಗಳ ಸೃಜನೆ ಆಗುತ್ತಿವೆ ಎಂದರು.
ತಾಪA ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ ಮಾತನಾಡಿ, ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನದಡಿ ಜಾಗೃತಿ ರ‍್ಯಕ್ರಮಗಳನ್ನು ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿ, ನ್ಯಾಯಬೆಲೆ ಅಂಗಡಿ, ಹಾಲಿನ ಕೇಂದ್ರ, ಗ್ರಂಥಾಲಯ ಹಾಗೂ ರ‍್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಸಲ್ಲಿಸಿದ ಬೇಡಿಕೆಗಳನ್ನು ರ‍್ಡ್ ಸಭೆ ಹಾಗೂ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆದು, ೨೦೨೫-೨೬ ನೇ ಸಾಲಿನ ಸಮಗ್ರ ಕ್ರಿಯಾಯೋಜನೆಯನ್ನು ತಯಾರಿಸಿ ಜಿಲ್ಲಾ ಪಂಚಾಯತಿಯಿ0ದ ಅನುಮೋದನೆ ಪಡೆಯಲಾಗುವುದು. ಪ್ರತಿಯೊಬ್ಬರೂ ನರೇಗಾ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಜಿಪಂ ಮಾಜಿ ಸದಸ್ಯರಾದ ಅಮರೇಶ ಗೋನಾಳ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಶರಣೇಗೌಡ ಮಾಲಿ ಪಾಟೀಲ್, ಗ್ರಾಪಂ ಅಧ್ಯಕ್ಷರಾದ ನೇತ್ರಾವತಿ ವೆಂಕೋಬ ಬಂಗಿ, ಉಪಾಧ್ಯಕ್ಷ ನಾಗಪ್ಪ ಬಲ್ಕುಂದಿ, ಗ್ರಾಪಂ ಪಿಡಿಓ ಮಲ್ಲಿಕಾರ್ಜುನ ಕಡಿವಾಳ, ರೇಣುಕನಗೌಡ, ವಿ.ಶ್ರೀನಿವಾಸ್, ನಾಗೇಂದ್ರ, ಬಾಷಾ, ಗ್ರಾಪಂ ಕಾರ್ಯದರ್ಶಿ ರವೀಂದ್ರ ಕುರ್ಲಕರ್ಣಿ, ತಾಲೂಕು ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ ಉಪಸ್ಥಿತರಿದ್ದರು.
