WhatsApp Image 2024-10-09 at 2.04.45 PM

ಪ್ರತಿ ರಂಗದಲ್ಲಿ ಅಭಿವೃದ್ಧಿಯೇ ದತ್ತು ಗ್ರಾಮದ ಉದ್ದೇಶ : ಪ್ರಕಾಶ ವಡ್ಡರ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 9- ಪ್ರತಿ ರಂಗದಲ್ಲಿ ಗ್ರಾಮವನ್ನು ಅಭಿವೃದ್ಧಿಪಡಿಸುವದೇ ದತ್ತು ಗ್ರಾಮದ ಉದ್ದೇಶವಾಗಿದೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ ಕರೆ ನೀಡಿದರು.

ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿಯ ಮೊರನಾಳ ಗ್ರಾಮದ ಮಲಿಯಾಂಬಿಕಾ ದೇವಸ್ಥಾನದ ಆವರಣದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದತ್ತು ಗ್ರಾಮ ಅಭಿವೃದ್ಧಿಗಾಗಿ ಆಯ್ಕೆ ಮಾಡಿರುವ ಕುರಿತು ಗ್ರಾಮಸ್ಥರೊಂದಿಗೆ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಇತ್ತೀಚಿಗೆ ಮಾನ್ಯ ಸಂಸದರ ಅಧ್ಯಕ್ಷತೆಯಲ್ಲಿ ಜರುಗಿದ ದಿಶಾ ಸಭೆಯಲ್ಲಿ ಕೊಪ್ಪಳ ತಾಲೂಕಿನ ಲೇಬಗೇರಿ ಗ್ರಾಮ ಪಂಚಾಯತಿಯ ಕಾಮನೂರು ಗ್ರಾಮ ಹಾಗು ಬೆಟಗೇರಿ ಗ್ರಾಮ ಪಂಚಾಯತಿ ಮೋರನಾಳ ಗ್ರಾಮಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದತ್ತು ಗ್ರಾಮಗಳನ್ನು ಆಯ್ಕೆ ಮಾಡಿಕೊಂಡಿದ್ದು ಗ್ರಾಮ ಪಂಚಾಯತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಿಂದ ಕಾಮಗಾರಿಗಳನ್ನು ಅನುಷ್ಠಾನಿಸಲು ಅವಕಾಶ ಇರುವ ಕುರಿತು ಮಾಹಿತಿ ನೀಡಿದರು.

ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿ ಕುರಿತು ಸಭೆಯಲ್ಲಿ ವಿವರಿಸಿದರು. ಎಲ್ಲಾ ತಾಂತ್ರಿಕ ಸಹಾಯಕರು ಪ್ರತಿ ಕಾಲೋನಿಗೆ ಭೇಟಿ ನೀಡಿ ಚರಂಡಿ, ರಸ್ತೆ, ಶಾಲಾಭಿವೃದ್ದಿ ಕಾಮಗಾರಿಗಳು ಅನುಷ್ಠಾನಿಸಲು ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಸೂಚಿಸಿದರು. ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆ ಹಾಗು ವಿವಿಧ ಇಲಾಖೆಗಳ ಒಗ್ಗೂಡಿಸುವಿಕೆ ಮೂಲಕ ಕಾಮಗಾರಿಗಳನ್ನು ಅನುಷ್ಠಾನಿಸಲಾಗುವದು ಎಂದು ಸಭೆಯಲ್ಲಿ ಗ್ರಾಮಸ್ಥರಿಗೆ ಮನವರಿಕೆ ಮಾಡಿದರು. ಗ್ರಾಮದಲ್ಲಿರುವ ಸಣ್ಣ, ಅತೀ ಸಣ್ಣ ರೈತರಿಗೆ ನರೇಗಾದಡಿ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವದು. ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ರೈತರು ಅರಿತುಕೊಂಡು ತಮ್ಮ ಆದ್ಯತಾ ಕಾಮಗಾರಿಗಳ ಪಟ್ಟಿಯನ್ನು ಸಲ್ಲಿಸಲು ತಿಳಿಸಿದರು.

ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ಗ್ರಾಮ ಪಂಚಾಯತ ಅಧ್ಯಕ್ಷರಾದ ದುರಗಪ್ಪ ಭಜೆಂತ್ರಿ, ಗ್ರಾ.ಪಂ ಸದಸ್ಯರಾದ ಅಂದಪ್ಪ ಚೀಲಗೋದ್ರ, ಭರಮಪ್ಪ ಹುಳ್ಳಿ, ಪಂಚಾಯತ ಅಭಿವೃದ್ದಿ ಅಧಿಕಾರಿ ದಾನಪ್ಪ ಸಂಗಟಿ, ತಾಂತ್ರಿಕ ಸಂಯೋಜಕ ಯಮನೂರಪ್ಪ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮದ ಮುಖಂಡರಾದ ಚಂದ್ರಪ್ಪ ಹುಳ್ಳಿ, ಯಲ್ಲಪ್ಪ ಮಾಗಳಾದ, ದೇವಪ್ಪ ಮಾಗಳಾದ, ಸಣ್ಣ ಈರಪ್ಪ ಅಣಬಿ, ಮಂಜಪ್ಪ ಸಂಗಟಿ, ತಾಂತ್ರಿಕ ಸಹಾಯಕರು,ಬಿಎಫ್ಟಿಗಳು, ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!