1

ಮಾನಸಿಕ ಆರೋಗ್ಯಕ್ಕಾಗಿ ಕೆಲಸದಲ್ಲಿ ಒತ್ತಡಬೇಡ : ಡಾ.ಸವಡಿ

ಕರುನಾಡ ಬೆಳಗು ಸುದ್ದಿ

ಗಂಗಾವತಿ, 15- ಮಾನಸಿಕ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಕೆಲಸಗಳಲ್ಲಿ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಬೇಕು ಎಂದು ಉಪವಿಭಾಗ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಈಶ್ವರ ಶಿ.ಸವಡಿ ಹೇಳಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾ ನಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಉಪವಿಭಾಗ ಸರ್ಕಾರಿ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2024ರ ಮಾನಸಿಕ ಅರಿವು ನೆರವು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾನಸಿಕತೆ ಎಂಬುವುದು ದೊಡ್ಡ ಸಮಸ್ಯೆಯಲ್ಲ, ಇದು ಎಲ್ಲರಲೂ ಸಾಮಾನ್ಯವಾಗಿರುತ್ತದೆ. ಆದರೆ, ಮಾನ ಸಿಕ ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ. ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋ ಗ್ಯವೂ ಅಷ್ಟೇ ಮುಖ್ಯವಾಗಿದೆ. ಮಾನಸಿಕ ಖಾಯಿಲೆಯನ್ನು ನಿರ್ಲಕ್ಷತನ ಮಾಡಬಾರದು.

ಪ್ರತಿ ಸಮಸ್ಯೆಗೆ ಪರಿಹಾರವಿದೆ. ಕುಟುಂಬದಲ್ಲಿನ ಸದಸ್ಯರೊಂದಿಗೆ ಪ್ರೀತಿಯಿಂದ ಮಾತ ನಾಡುವುದರಿಂದ ನೆಮ್ಮದಿ ಜೀವನ ಮತ್ತು ಆರೋಗ್ಯದಿಂದ ಇರಬಹುದು. ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಿ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಬೇಕು. ವೈಯಕ್ತಿಕ ಕೆಲಸ ಮತ್ತು ಕಾರ್ಯ ನಿರ್ವಹಿಸುವಂತಹ ಸ್ಥಳಗಳಲ್ಲಿ ಸರಿಯಾದ ರೀತಿಯಲ್ಲಿ ಜವಾಬ್ದಾರಿ ಮತ್ತು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಿ ಯಾವುದೇ ರೀತಿಯ ಮಾನಸಿಕ ಒತ್ತಡಕ್ಕೆ ಒಳಗಾಗಬಾರದು ಹಾಗೂ ನಿಮ್ಮ ಮನೆಯಲ್ಲಿ ಇದ್ದು ನಿಮ್ಮ ಸಮಸ್ಯೆಗಳನ್ನು ೧೪೪೧೬ ಈ ನಂಬರಿಗೆ ಕರೆ ಮಾಡಿ ನಿಮ್ಮ ಸಮಸ್ಯೆಯನ್ನು ಕೇಳಬಹುದು ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾವಾದಿ ನಾಗೇಶ ಪಾಟೀಲ್ ಮಾತನಾಡಿದರು.

ತಾಲೂಕು ವೈದ್ಯಾಧಿಕಾರಿ ಡಾ.ಗೌರಿಶಂಕರ, ಮನೋವೈದ್ಯ ಡಾ.ವಾದಿರಾಜ, ಮನೋ ಕಾರ್ಯಕರ್ತ ಯಮನೂರಪ್ಪ ಬಜೆಂತ್ರಿ, ಆರೋಗ್ಯ ಸಿಬ್ಬಂದಿಗಳಾದ ಶಿವಾನಂದ ರಾಯ್ಕರ್, ರಾಜು, ಪಲ್ಲವಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!