ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 15- ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಆರ್.ಬಿ.ಎಸ್.ಕೆ ಮತ್ತು ಬಿ.ಎ.ಎಮ್.ಎಸ್ ವೈದ್ಯಾಧಿಕಾರಿಗಳ ಹುದ್ದೆಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ ಮತ್ತು ತಿರಸ್ಕೃತ ಪಟ್ಟಿಗಳನ್ನು ಕಚೇರಿಯ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣ ತಿತಿತಿ.ಞoಠಿಠಿಚಿಟ.ಟಿiಛಿ.iಟಿ ದಲ್ಲಿ ಪ್ರಕಟಿಸಲಾಗಿದ್ದು, ಅಕ್ಟೋಬರ್ ೧೬ ರಿಂದ ಅ.೨೪ ರವರೆಗೆ ಅಭ್ಯರ್ಥಿಗಳಿಂದ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ನಂತರ ಬಂದAತಹ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
