1

ಲೋಕಾಯುಕ್ತರಿಂದ ಸಾರ್ವಜನಿಕ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 16- ಬಳ್ಳಾರಿ ಲೋಕಾಯುಕ್ತ ಸಿಪಿಐ ಸಂಗಮೇಶ್, ತಹಸಿಲ್ದಾರ್ ಹೆಚ್.ವಿಶ್ವನಾಥ ಸಮ್ಮುಖದಲ್ಲಿ ಸಾರ್ವಜನಿಕ ಕುಂದುಕೊರತೆ ಮತ್ತು ಅಹ್ವಾಲು ಸ್ವೀಕಾರ ಕಾರ್ಯಕ್ರಮ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆಯಿತು.

ತಾಲೂಕು ಮಟ್ಟದಲ್ಲಿ ಸಾರ್ವಜನಿಕರು ತಮ್ಮ ಕೆಲಸದಲ್ಲಿ ಅನಾವಶ್ಯಕ ವಿಳಂಬ ಹಣದ ಬೇಡಿಕೆ ಇದ್ದರೆ ನ್ಯಾಯಯುತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡದೆ ಕೆಲಸ ಮಾಡಿಕೊಡಲು ತೊಂದರೆ ಕೊಡುತ್ತಿದ್ದರೆ ಅಥವಾ ಲಂಚ ಕೇಳಿದರೆ ದೂರು ನೀಡಬಹುದು ಎಂದು ಸಾರ್ವಜನಿಕರಿಗೆ ಲೋಕಾಯುಕ್ತರು ತಿಳಿಸಿದರು.

ಪ್ರತಿ ತಿಂಗಳು ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ನಗರ ಸಭೆ ಅಧಿಕಾರಿಗಳ ವಿರುದ್ಧ ಹಲವು ದೂರು ಬರುತ್ತಿವೆ ಸಾರ್ವಜನಿಕ ಕೆಲಸಗಳಿಗೆ ಸರಿಯಾಗಿ ಸ್ಪಂದಿಸದೆ ಸಾರ್ವಜನಿಕರು ಕಚೇರಿಗೆ ಅಲೆದಾಟ ಮಾಡುತ್ತಿರುವ ಬಗ್ಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಿಪಿಐ ಸಂಗಮೇಶ್ ಅವರು ನಗರ ಸಭೆ ಅಧಿಕಾರಿಗಳ ನಿರ್ಲಕ್ಷದಿಂದ ಜನರು ಕಚೇರಿಗೆ ಪದೇ ಪದೇ ಅಲೆದಾಟಿ ಮಾಡುತ್ತಿರುವ ಕಾರಣ ನಗರಸಭಾ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ನಗರಸಭೆ ಪೌರಯುಕ್ತ ಹೆಚ್.ಎನ್.ಗುರುಪ್ರಸಾದ್, ಗ್ರೇಡ್-೨ ತಹಶೀಲ್ದಾರ್ ಸತ್ಯನ್, ತಾಲೂಕ ಮಟ್ಟದ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಸಾರ್ವಜನಿಕರು ಇದ್ದರು.

Leave a Reply

Your email address will not be published. Required fields are marked *

error: Content is protected !!