2

23 ರಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿನೇಶ್ ಗುಂಡೂರಾವ್ ಚಾಲನೆ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 23- ಈ ಭಾಗದ ಬಹುದಿನದ ಬೇಡಿಕೆಯಾಗಿದ್ದು ಸಹಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚಿಕ್ಕಮ್ಯಾಗೇರಿ ಬಂಡಿ ಬಳಗೇರಿ ಗ್ರಾಮಕ್ಕೆ ಸರಕಾರ ಮಂಜೂರು ಮಾಡಿದ್ದರಿಂದ ಅ.೨೩ ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡುವರು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.

ತಾಲೂಕಿನ ಬಂಡಿ ಮತ್ತು ಚಿಕ್ಕಮ್ಯಾಗೇರಿ ಹಾಗೂ ಕುಕನೂರು ತಾಲೂಕಿನ ಬಳಗೇರಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರ ಮಂಜೂರು ಮಾಡಿದ್ದರಿಂದ ಈ ಭಾಗದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರು ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿರುವ ಕನಕ ಭವನಕ್ಕೆ ಭೇಟಿ ನೀಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಪರಿಶೀಲಿಸಿದರು.

ಈ ಮೂರು ಗ್ರಾಮಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಾಲನೆ ನೀಡುವದರಿಂದ ಈ ಭಾಗದ ಸಾರ್ವಜನಿಕರಿಗೆ ಬಡವರಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಬಸವರಾಜ ತನ್ನಳ್ಳಿ, ಸಿಪಿಐ ಮೌನೇಶ್ವರ ಮಾಲಿಪಾಟೀಲ್, ಗ್ರಾಮ ಪಂಚಾಯತಿ ಅಧ್ಯಕ್ಷ ಶರಣಪ್ಪ ಕುರಿ, ಶರಣಪ್ಪ ಗಾಂಜಿ, ಹಂಪಯ್ಯಸ್ವಾಮಿ ಹಿರೇಮಠ, ಈಶ್ವರ ಅಟಮಾಳಗಿ, ಡಾ.ಶಿವನಗೌಡ ದಾನರಡ್ಡಿ, ಸುಧೀರ್ ಕೂರ್ಲಹಳ್ಳಿ, ಗವಿಸಿದ್ದಪ್ಪ ಚಂಡೂರ, ಪಕೀರಪ್ಪ ಇಟಗಿ, ಶರಣಗೌಡ ಪಾಟೀಲ ಮತ್ತು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!