ರಾಮಾಯಣದಿಂದ ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬಹುದು : ಕೃಷ್ಣವೇಣಿ
ಕರುನಾಡ ಬೆಳಗು ಸುದ್ದಿ
ಗಂಗಾವತಿ, 18- ತಾಲ್ಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಸಂಸ್ಥೆಯ ಉಪಾಧ್ಯಕ್ಷ ನೆಕ್ಕಂಟಿ ಆದರ್ಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲೆಯ ಶೈಕ್ಷಣಿಕ ಮುಖ್ಯಸ್ಥರಾದ ಶ್ರೀಮತಿ ಕೃಷ್ಣವೇಣಿ ಎಸ್, ಶಾಲೆಯ ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿಯವರ ಹಿನ್ನೆಲೆ, ವೃತ್ತಿ, ವಾಲ್ಮೀಕಿಯವರಿಗೆ ನಾರದಮುನಿಗಳಿಂದ ದೊರೆತ ಉಪದೇಶಗಳನ್ನು ತಿಳಿಸಿ ರಾಮಾಯಣದಿಂದ ಅಳವಡಿಸಿಕೊಳ್ಳಬಹುದಾದ ಜೀವನ ಮೌಲ್ಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಶ್ರೀಮತಿ ಜೆ ಪುಷ್ಪಲತಾ, ಶಾಲೆಯ ಪಿ.ಆರ್.ಎಮ್ ನಿಂಗಪ್ಪ ಭಾಗವಹಿಸಿದ್ದರು.
