2

ಶಿಕ್ಷಕರು ಸಹನ, ತಾಳ್ಮೆಯನ್ನು ರೂಢಿಸಿಕೊಳ್ಳಬೇಕು : ಟಿ.ವಿ.ಮಾಗಳದ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 21- ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಶಿಕ್ಷಕರು ಸಹನೆ, ತಾಳ್ಮೆಯನ್ನು ರೂಢಿಸಿಕೊಳ್ಳಬೇಕು ಅಂದಾಗ ವಿದ್ಯಾರ್ಥಿ ಉಜ್ವಲ ಭವಿಷ್ಯ ರೂಪಿಸುವಲ್ಲಿ ಸಹಕಾರವಾಗುತ್ತದೆ ಎಂದು ರಾಷ್ಟçಮಟ್ಟದ ಪ್ರಶಸ್ತಿ ವಿಜೇತರು, ನಿವೃತ್ತ ಶಿಕ್ಷಕ ಟಿ.ವಿ.ಮಾಗಳದ ಅಭಿಪ್ರಾಯಪಟ್ಟರು.

ಅವರು ನಗರದ ಶ್ರೀ ಗವಿಸಿದ್ಧೇಶ್ವರ ಸಂಯುಕ್ತ ಪ್ರೌಢಶಾಲೆಯ ೧೯೮೯-೯೦ನೇ ಸಾಲಿನ ಎಸ್‌ಎಸ್‌ಎಲ್‌ಸಿ. ವಿದ್ಯಾರ್ಥಿ ಬಳಗದಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು.
ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯ ಬಗ್ಗೆ ಒಂದೆ ಬಗೆಯ ಕಾಳಜಿಯನ್ನು ವಹಿಸಬೇಕು. ವಿದ್ಯಾರ್ಥಿಯ ಬಗ್ಗೆ ನಿರ್ಲಕ್ಷö್ಯತೆ, ಉದಾಸೀನತೆ ಸಲ್ಲದು, ಇದರಿಂದ ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಡಲಿ ಪೆಟ್ಟುಕೊಟ್ಟಂತಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬಗ್ಗೆ ಹೆಚ್ಚಿನ ಕಾಳಜಿಯನ್ನು ಶಿಕ್ಷಕರು ವಹಿಸಿದಾಗಲೇ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲು ಸಾಧ್ಯ. ಇಂದು ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯವಶ್ಯಕ ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಹೆಚ್ಚಿನ ಆಸಕ್ತಿವಹಿಸಬೇಕು ಎಂದರು.

ಪಾಲಕರು ತಮ್ಮ ಆಸೆ-ಆಕಾಂಕ್ಷೆಗಳನ್ನು ಮಕ್ಕಳ ಮೇಲೆ ಹೇರದೇ ಅವರ ಅಭಿರುಚಿಗೆ ತಕ್ಕಂತೆ ಮಕ್ಕಳನ್ನು ಪ್ರೋತ್ಸಾಹಿಸುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯ ಅಂದಾಗ ಮಾತ್ರ ಶಿಕ್ಷಕರ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ. ಮಕ್ಕಳಿಗೆ ಯಾವುದೇ ರೀತಿಯ ಒತ್ತಡ ಹಾಕದೇ ಮುಕ್ತ ವಿದ್ಯಾಭ್ಯಾಸಕ್ಕೆ ಅವಕಾಶ ನೀಡಬೇಕು ಎಂದು ಕಿವಿ ಮಾತು ಹೇಳಿದರು.

ಈ ಗುರುವಂದನಾ ಕಾರ್ಯಕ್ರಮದಲ್ಲಿ ದಿವಂಗತ ಶಿಕ್ಷಕರ ಕುಟುಂಬಗಳನ್ನು ಕರೆದು ಸನ್ಮಾನಿಸುತ್ತಿರುವುದು ತೀವ್ರ ಹರ್ಷವನ್ನುಂಟು ಮಾಡಿದೆ. ಈ ನಿಮ್ಮ ಕಾರ್ಯದಿಂದ ಶಿಕ್ಷಕರ ಆತ್ಮಕ್ಕೆ ಶಾಂತಿ ನೀಡಿದಂತಾಗುತ್ತಿದೆ. ನೀವು ನೀಡಿದ ಶಿಕ್ಷಕರಿಗೆ ಗೌರವ ಇತರರ ವಿದ್ಯಾರ್ಥಿಗಳಿಗೂ ಮಾದರಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಶಾಲೆಯ ಮುಖ್ಯೋಪಾಧ್ಯಾಯ ಅಮರೇಶಪ್ಪ ಕರಡಿ ವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ವೇದಿಕೆ ಮೇಲೆ ಇದ್ದ ನಿವೃತ್ತ ಶಿಕ್ಷಕ ಬಳಗದ ಗವಿಸಿದ್ದಪ್ಪ ಕೊಪ್ಪಳ, ಎಂ.ಎ0.ಕ0ಬಾಳಿಮಠ, ಎಸ್.ಸಿ.ಹಿರೇಮಠ, ವಿ.ಕೆ.ಜಾಗಟಗೇರಿ, ಪಿ.ಡಿ.ಬಡಿಗೇರ, ಗವಿಸಿದ್ದಪ್ಪ ಚಲುವಾದಿ, ಬಿ.ವಿ.ರಾಮರೆಡ್ಡಿ ಮತ್ತಿತರರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಪ್ರಾರಂಭದಲ್ಲಿ ಅಗಲಿದ ಶಿಕ್ಷಕರಿಗೆ ಮೌನಾಚಾರಣೆ ಮಾಡಿದರು. ವೇದಿಕೆ ಮೇಲಿದ್ದಎಲ್ಲಾ ಶಿಕ್ಷಕರನ್ನು ಗೌರವಿಸಿ ಸತ್ಕರಿಸಲಾಯಿತು.

ಪ್ರಾರಂಭದಲ್ಲಿ ಹೇಮಂತ ಕುಮಾರ ದೊಡ್ಡಮನಿ ಪ್ರಾರ್ಥಿಸಿದರೆ, ಗಂಗಾಧರ ಕೇಸರಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸತ್ಯನಾರಾಯಣ ಕುಲಕರ್ಣಿ ನಿರ್ವಹಿಸದರೆ ಕೊನೆಯಲ್ಲಿ ಲಿಂಗರಾಜ ಗೆಜ್ಜಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!