12

ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ : ನಲಿನ್ ಅತುಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 21- ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

೨೦೨೪-೨೫ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರದಂದು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಾಕೃತಿಕ ದುರಂತ ಮತ್ತು ಹವಾಮಾನ ವೈಪರಿತ್ಯಗಳಿಂದ ರೈತರು ಬೆಳೆದ ಬೆಳೆಗಳಿಗೆ ಅಪಾಯ ಉಂಟಾದಾಗ ರೈತರನ್ನು ರಕ್ಷಿಸಿಸುವ ಮಾಧ್ಯಮವೇ ಬೆಳೆ ವಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಜಾರಿಗೆ ತರಲಾಯಿತು. ಯೋಜನೆಯಡಿ ಮೊಬೈಲ್ ಆಧಾರಿತ ತಂತ್ರಜ್ಞಾನ ಬಳಸಿಕೊಂಡು ಬೆಳೆ ಕಟಾವು ಪ್ರಯೋಗಗಳ ಮೂಲಕ ವಾಸ್ತವಿಕ ಇಳುವರಿಯನ್ನು ಕಂಡು ಹಿಡಿಯಲಾಗುತ್ತಿದ್ದು, ಬೆಳೆ ಕಟಾವಿನ ನಂತರದಲ್ಲಿ ಸಂಭವಿಸುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇಕಡಾ ೭೫ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇಕಡಾ ೨೫ ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ಒದಗಿಸಬೇಕು ಎಂದರು.

ಫಸಲ್ ಭೀಮಾ ಯೋಜನೆ ಅನುಷ್ಠಾನ ಇಲಾಖೆ, ಸಂಸ್ಥೆಗಳ ಪಾತ್ರ ಪ್ರಮುಖ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಪಾತ್ರ ಪ್ರಮುಖವಾಗಿದ್ದು, ಅಧಿಸೂಚಿತ ಬೆಳೆಗಳು ಮತ್ತು ಘಟಕಗಳ ಬಗ್ಗೆ ಬ್ಯಾಂಕುಗಳು, ರೈತ ಸಂಪರ್ಕ ಕೇಂದ್ರಗಳ ಮತ್ತು ಗ್ರಾಮ ಪಂಚಾಯಿತಿ ಕಛೇರಿಗಳ ಸೂಚನಾ ಫಲಕಗಳ ಮೇಲೆ ಪ್ರಕಟಿಸಿ ಯೋಜನೆಯ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಇದರ ಜೊತೆಗೆ ಪ್ರಚಾರ ಕಾರ್ಯ ಕೈಗೊಂಡು ರೈತರಿಗೆ ತಿಳುವಳಿಕೆ ನೀಡಬೇಕು. ಯೋಜನೆಯ ಬಗ್ಗೆ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ, ಗ್ರಾಮಸಭಾ ಸಭೆಗಳಲ್ಲಿ ಹಾಗೂ ಜನಸ್ಪಂದನ ಸಭೆಗಳಲ್ಲಿಯೂ ಮಾಹಿತಿ ನೀಡಬೇಕು. ಇಲಾಖೆಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮತ್ತು ಜಂಟಿ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡುವ ರೈತರಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವಂತೆ ಜಲ್ಲಾಧಿಕಾರಿಗಳು ಸೂಚನೆ ನೀಡಿದರು.

ಯೋಜನೆಯ ಅನುಷ್ಠಾನಕ್ಕೆ ಸಂಬAಧಿಸಿದ ಇಲಾಖೆಗಳಾದ ತೋಟಗಾರಿಕೆ, ಕಂದಾಯ, ಜಿಲ್ಲಾ ಸಾಂಖ್ಯಿಕ ಇಲಾಖೆ ಮತ್ತು ಬ್ಯಾಂಕ ಸಿಬ್ಬಂಧಿಗಳಿಗೆ ಯೋಜನೆಯ ಮಾರ್ಗ ಸೂಚಿಗಳನ್ನು ಒದಗಿಸಬೇಕು. ಬೆಳೆ ಬಿತ್ತನೆ ಕ್ಷೇತ್ರವನ್ನು ಕಂದಾಯ ಮತ್ತು ಸಂಖ್ಯಿಕಾ ಇಲಾಖೆಯ ಸಮನ್ವಯದೊಂದಿಗೆ ನೀಡಿ. ಕಂದಾಯ, ಸಾಂಖ್ಯಿಕ ಇಲಾಖೆ ಮತ್ತು ಇತರ ಇಲಾಖೆಗಳೊಂದಿಗೆ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಬೇಕು. ಬೆಳೆ ಸಾಲ ಪಡೆಯದ ರೈತರನ್ನು ಯೋಜನೆಯಡಿ ನಿಗದಿತ ದಿನಾಂಕದೊಳಗೆ ನೋಂದಾಯಿಸಬೇಕು. ಕ್ರೋಡಿಕೃತ ಪ್ರಸ್ತಾವನೆಯನ್ನು ನೋಡಲ್ ಬ್ಯಾಂಕುಗಳ ಮೂಲಕ ನಿಗದಿತ ಸಮಯದೊಳಗೆ ವಿಮಾ ಸಂಸ್ಥೆಗೆ ಕಳುಹಿಸಲು ಕ್ರಮ ವಹಿಸಿ. ವಿಮಾ ಸಂಸ್ಥೆಯಿAದ ಪಡೆದ ಬೆಳೆ ವಿಮಾ ನಷ್ಟ ಪರಿಹಾರವನ್ನು ನಿಗದಿತ ದಿನಗಳೊಳಗೆ ರೈತರ ಖಾತೆಗೆ ಜಮಾ ಮಾಡಲು ಕ್ರಮ ವಹಿಸಬೇಕು. ಫಲಾನುಭವಿಗಳ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ಸಾಮಾನ್ಯ ಸೇವಾ ಕೇಂದ್ರ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸಿದ ಬೆಳೆ ಸಾಲ ಪಡೆಯದ ರೈತರ ವಿವರಗಳನ್ನು ಸಂರಕ್ಷಣೆ ತಂತ್ರಾAಶದಲ್ಲಿ ದಾಖಲಿಸಬೇಕು. ಬೆಳೆ ಸಾಲ ಪಡೆಯದ ರೈತರ ವಿವರಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಲು ಪ್ರತಿ ಅರ್ಜಿಗೆ ಕೇಂದ್ರ ಸರಕಾರದ ಮಾರ್ಗಸೂಚಿಯನ್ವಯ ಸೇವಾ ಶುಲ್ಕವನ್ನು ವಿಮಾ ಸಂಸ್ಥೆಯೂ ಸಾಮಾನ್ಯ ಸೇವಾ ಹಾಗೂ ಗ್ರಾಮ ಒನ್ ಕೇಂದ್ರಗಳಿಗೆ ನೀಡಬೇಕು ಎಂದು ಹೇಳಿದರು.

ಜಿಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ ಅವರು ಮಾತನಾಡಿ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಟಾಟಾ ಎಐಜಿ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, ಕೊಪ್ಪಳ ಜಿಲ್ಲೆಗೆ ಆಯ್ಕೆಯಾಗಿರುತ್ತದೆ. ಇನ್ಸೂರೆನ್ಸ್ ಕಂಪನಿಯವರು ಕೃಷಿ ಇಲಾಖೆಯಿಂದ ಇಳುವರಿ ಮಾಹಿತಿ ಪಡೆದು ಬೆಳೆವಿಮಾ ನಷ್ಟ ಪರಿಹಾರವನ್ನು ಲೆಕ್ಕ ಹಾಕಬೇಕು. ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟಗಳಲ್ಲಿ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ಮತ್ತು ರೈತರ ಬೆಳೆ ವಿಮೆ ಸಮಸ್ಯೆಗಳನ್ನು ಬಗೆಹರಿಸಲು ಕೃಷಿ ಪದವಿದರರನ್ನು ನೇಮಿಸಬೇಕು. ಬೆಳೆ ಕಟಾವು ಪ್ರಯೋಗಗಳಲ್ಲಿ ಸಕ್ರೀಯಾವಾಗಿ ಪಾಲ್ಗೊಳ್ಳಬೇಕು ಎಂದು ಮಾಹಿತಿ ನೀಡಿದರು.

ಪೋಸ್ಟರ್ ಬಿಡುಗಡೆ : ೨೦೨೪-೨೫ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಹಿಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಕೊಪ್ಪಳ ಕೃಷಿ ಇಲಾಖೆಯಿಂದ ಮುದ್ರಿಸಿದ ಗ್ರಾಪಂ ಮಟ್ಟದಲ್ಲಿ ಅಧಿಸೂಚಿತ ಬೆಳೆಗಳ ವಿವರ, ರೈತರು ಬೆಳೆ ವಿಮೆ ಮಾಡಿಸಬೇಕಾದ ಕ್ರಮಗಳು ಸೇರಿದಂತೆ ಇನ್ನೀತರ ಮಾಹಿತಿಯ ಪೋಸ್ಟರನ್ನು ಇದೆ ವೇಳೆ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ, ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ್, ಪಶು ಇಲಾಖೆ ಉಪನಿರ್ದೇಶಕ ಡಾ.ಪಿ.ಎಂ.ಮಲ್ಲಯ್ಯ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ ಮಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು, ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿಗಳು, ಕೃಷಿ ಇಲಾಖೆಯ ವಿವಿಧ ತಾಲೂಕುಗಳ ಸಹಾಯಕ ನಿರ್ದೇಶಕರು ಮತ್ತು ಇನ್ನಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!