1

ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ : ಹಂಪಣ್ಣ

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 24- ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ. ಅರ್ಥಪೂರ್ಣ ವಾಗಿ ನಾಡಹಬ್ಬದಂತೆ ಆಚರಿಸಲು ನಿರ್ಧಾರ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಗ್ರೇಡ್ ೨ ತಹಶೀಲ್ದಾರ್ ಹಂಪಣ್ಣ ಹೂರಪೇಟೆ ಹೇಳಿದರು.

ಈ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಲು ಕನ್ನಡ ಪರ ಸಂಘಟನೆ ಅಧಿಕಾರಿಗಳಿಗೆ ಸೂಚನೆ. ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ನ. ೧ ಕನ್ನಡ ರಾಜ್ಯೋತ್ಸವ ಆಚರಿಸುವ ಕುರಿತು ಗ್ರೇಡ್-೨ ತಹಶೀಲ್ದಾರ್ ಹಂಪಣ್ಣ ಹೂರಪೇಟೆ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಸಲು ಕೆಲವು ರೂಪುರೇಷೆಗಳನ್ನು ಸಂಗ್ರಹಿಸಲಾಯಿತು. ಕನ್ನಡ ರಾಜ್ಯೋತ್ಸವ ಕನ್ನಡಿಗರ ಸಂಭ್ರಮದ ನಾಡಹಬ್ಬದಂತೆ ಕಾರ್ಯಕ್ರಮವನ್ನುಅಚ್ಚುಕಟ್ಟು ಆಗಿ ಆಚರಿಸಲು ನಿರ್ಧರಿಸಿದೆ ಇದಕ್ಕೆ ಎಲ್ಲರ ಸಹಕಾರ ಬಹಳ ಮುಖ್ಯ ಎಂದು ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದ್ಯಕ್ಷ ಕನ್ನಡ ಪರ ಹೋರಾಟಗಾರ ರಾಜಶೇಖರ ಶ್ಯಾಗೋಟಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಎಂದರೆ ಕನ್ನಡ ಅಭಿಮಾನಿಗಳ ವಿಜ್ರಂಭಣೆಯಿAದ ಆಚರಿಸುವ ಹಬ್ಬ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕನ್ನಡಿಗರನ್ನು ಗುರುತಿಸಿ ಗೌರವಿಸಬೇಕು. ತಾಲೂಕಿನ ಪ್ರತಿಯೊಂದು ಶಾಲೆಗಳಲ್ಲಿ ರಾಜ್ಯೋತ್ಸವ ಆಚರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ನವೆಂಬರ್ ೧ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರತಿಯೊಂದು ಸರಕಾರಿ ಇಲಾಖೆಯಲ್ಲಿ ಕನ್ನಡ ಬಾವುಟ ರಾರಾಜಿಸಬೇಕು ಎಂದು ಹೇಳಿದರು.

ಪತ್ರಕರ್ತರ ಧ್ವನಿ ಸಂಘದ ತಾಲೂಕ ಅಧ್ಯಕ್ಷ ಶ್ರೀಕಾಂತಗೌಡ ಮಾಲಿಪಾಟೀಲ ಮಾತನಾಡಿ, ಕಾರ್ಯಕ್ರಮಕ್ಕೆ ಬರುವ ಶಾಲಾ ಮಕ್ಕಳಿಗೆ ನೆರಳು ಮತ್ತು ಕುಡಿಯುವ ನೀರಿನ ಮತ್ತು ಶ್ಯಾಮಿಯ್ಯಾನ್ ವ್ಯವಸ್ಥೆ ಮಾಡಬೇಕು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಆಚರಣೆ ಮಾಡಬೇಕು ಎಂದು ಸಲಹೆ ನೀಡಿದರು.

ಪಟ್ಟಣದಲ್ಲಿನ ಎಲ್ಲಡೆ ಕನ್ನಡ ಇಲ್ಲದ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಂ.ಪ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಅಮರೇಶ ಹುಬ್ಬಳ್ಳಿ ಮಾತನಾಡಿ, ಈ ವರ್ಷ ದೀಪಾವಳಿ ಹಬ್ಬ ಮತ್ತು ಕನ್ನಡ ರಾಜ್ಯೋತ್ಸವ ಎರಡು ಒಟ್ಟಗಿ ಬಂದಿರುವದರಿ0ದ ನಾಡಹಬ್ಬದಂತೆ ವಿಜ್ರಂಭಣೆಯಿAದ ಆಚರಿಸಬೇಕು ಎಂದರು.

ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ತಮ್ಮೆಲ್ಲರ ಸಲಹೆಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ತಾಲೂಕಿನಲ್ಲಿ ಕಾರ್ಯಕ್ರಮವನ್ನು ಒಳ್ಳೆಯ ರೀತಿಯಲ್ಲಿ ಮಾಡಲು ಪ್ರಯತ್ನಿಸುತ್ತೇವೆ ಶಾಲೆಗಳಲ್ಲಿ ವಿಶಿಷ್ಟ ರೀತಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವದು ಮತ್ತು ಕನ್ನಡ ನಾಡು-ನುಡಿ, ಕಲೆ ಸಂಸ್ಕೃತಿಗೆ ಸಂಭದಿಸಿದAತೆ ಶಾಲಾ ಮಕ್ಕಳಿಂದ ಸ್ತಬ್ಧಚಿತ್ರ ಮತ್ತು ಸಂಸ್ಕೃತಿಕ ಕಾರ್ಯಕ್ರಮಗಳ ರೂಪರೇಷಗಳು ಕಾರ್ಯಕ್ರಮ ಅರ್ಥಪೂರ್ಣವಾಗುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಯಿತ್ತು ಎಂದು ಗ್ರೇಡ್-೨ ತಹಶೀಲ್ದಾರ್ ಹಂಪಣ್ಣ ಹೊಸಪೇಟೆ ತಿಳಿಸಿದರು.

ಈ ಸಂದರ್ಭದಲ್ಲಿ ಪಂ.ಪ.ಮುಖ್ಯಾಧಿಕಾರಿ ನಾಗೇಶ್, ಪಂ.ಪ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಸದಸ್ಯ ಅಮರೇಶ ಹುಬ್ಬಳ್ಳಿ, ಕಳಕಪ್ಪ ತಳವಾರ, ಹನುಮಂತ ಬಜಂತ್ರಿ, ಬಿಸಿಎಂ ಇಲಾಖೆ ಶಿವಶಂಕರ್ ಕರಡಕಲ್, ತೋಟಗಾರಿಕೆ ಇಲಾಖೆಯ ನಿಂಗನಗೌಡ್ರ ಪಾಟೀಲ, ಪಶು ಇಲಾಖೆಯ ಸುನೀಲ್ ಚಿತ್ರಗಾರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಹನಮಗೌಡ ಪಾಟೀಲ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದ್ಯಕ್ಷ ರಾಜಶೇಖರ ಶ್ಯಾಗೋಟಿ, ಶಯ ರಕ್ಷಣಾ ವೇದಿಕೆ ತಾಲೂಕ ಅದ್ಯಕ್ಷ ಶಂಕರ್ ಮೂಲಿ, ಶಿವನಗೌಡ ನಾಗನಗೌಡ್ರ, ಕರಿಯಪ್ಪ ತಳವಾರ, ಮೌನೇಶ ಬಡಗೇರ, ಮಂಗಳೇಶ ಕುಂಬಾರ, ಮಂಜುನಾಥ ಸಿಡ್ನಹಳ್ಳಿ, ಗೌಡಪ್ಪ ಬಲಕುಂದಿ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!