3

ದಿನನಿತ್ಯದ ಆಹಾರದಲ್ಲಿ ಅಯೋಡಿನ್ ಅಂಶವಿರುವ ಉಪ್ಪನ್ನೇ ಬಳಸಿ : ಡಾ.ನಂದಕುಮಾರ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 24- ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆ ನಿಯಂತ್ರಣ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಅರಿವು ಮೂಡಿಸುವ ಕಾರ್ಯಕ್ರಮವು ಇತ್ತೀಚೆಗೆ ನಗರದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ನೆಡೆಯಿತು.

ಜಿಲ್ಲಾ ಸರ್ವೇಕ್ಷಣಾಧಿಕಾರಿಯಾದ ಡಾ.ನಂದಕುಮಾರ ಹೆಚ್ ಅವರು ಮಾತನಾಡಿ, ಆಯೋಡಿನ್ ಕೊರತೆಯಿಂದ ಮುಖ್ಯವಾಗಿ ಮಕ್ಕಳಲ್ಲಿ ಬುದ್ದಿ ಮಾಂದ್ಯತೆ ಉಂಟಾಗುತ್ತದೆ. ಗರ್ಬಿಣಿ ಮಹಿಳೆಯರಲ್ಲಿ ಗರ್ಭಪಾತ ಮತ್ತು ಹುಟ್ಟುವ ಮಕ್ಕಳಲ್ಲಿ ಜನ್ಮಜಾತ ದೋಷಗಳು ಉಂಟಾಗುತ್ತದೆ. ಪ್ರತಿದಿನ ನಾವೆಲ್ಲರೂ ಐಯೋಡಿನ್ ಯುಕ್ತ ಉಪ್ಪನ್ನು ಸೇವನೆ ಮಾಡಲು ತಿಳಿಸಿದರು. ಸಮುದಾಯ ಮಟ್ಟದಲ್ಲಿ ಆರೋಗ್ಯ ಸಿಬ್ಬಂದಿಯವರಿAದ ಐಯೋಡಿನ್ ಕೊರತೆಯಿಂದ ಉಂಟಾಗುವ ನೂನ್ಯತೆಗಳ ಬಗ್ಗೆ ಅರಿವು ಮೂಡಿಸುವುದರ ಬಗ್ಗೆ ತಿಳಿಸಿದರು.

ಪ್ರತಿ ವರ್ಷ ಅಕ್ಟೋಬರ್ ೨೧ ರಿಂದ ೨೭ ರವರೆಗೆ “ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆ ನಿಯಂತ್ರಣ ಸಪ್ತಾಹ” ಕಾರ್ಯಕ್ರಮ ಆಚರಿಸಲಾಗುತ್ತದೆ. ಮನುಷ್ಯನಿಗೆ ಬದುಕಲು ಮುಖ್ಯವಾಗಿ ನೀರು, ಗಾಳಿ ಹಾಗೂ ಆಹಾರ ಅತ್ಯಂತ ಅವಶ್ಯಕವಾಗಿ ಬೇಕಾಗುತ್ತದೆ. ಅದರಂತೆ ಪೌಷ್ಠಿಕ ಆಹಾರ ಸೇವಿಸುವುದರ ಜೊತೆಗೆ ಅಂಯೋಡಿನ್ ಅಂಶವಿರುವ ಉಪ್ಪನ್ನೇ ಬಳಸಬೇಕು ಇದು ಮನುಷ್ಯನ ದೈಹಿಕ, ಮಾನಸಿಕ ಬೆಳವಣಿಗೆಗೆ ಅತಿ ಅವಶ್ಯಕವಾಗಿರುತ್ತದೆ. ಪ್ರತಿ ಒಬ್ಬರು ತಮ್ಮ ದಿನನಿತ್ಯದ ಆಹಾರದಲ್ಲಿ ಅಯೋಡಿನ್ ಅಂಶವಿರುವ ಉಪ್ಪನ್ನೇ ಬಳಸಬೇಕು. ಇದು ಮನುಷ್ಯನ ಬುದ್ದಿಮಟ್ಟ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸುತ್ತದೆ.

ವಿಶೇಷವಾಗಿ ಗರ್ಭೀಣಿಯರು, ಹಾಲುಣಿಸುವ ತಾಯಂದಿರು, ಮಕ್ಕಳು ಹಾಗೂ ಹದಿ-ಹರೆಯದವರು ಕಡ್ಡಾಯವಾಗಿ ಅಯೋಡಿನ್ ಉಪ್ಪನ್ನೇ ಬಳಸಬೇಕು. ಅಯೋಡಿನ್ ಅಂಶವಿರುವ ಉಪ್ಪನ್ನು ಬಳಸದಿದ್ದರೆ, ಗರ್ಭಿಣಿಯರಲ್ಲಿ ಪದೇ ಪದೇ ಗರ್ಭಪಾತ ಸತ್ತು ಹುಟ್ಟುವ ಮಕ್ಕಳು ಸಂತಾನೋತ್ಪತ್ತಿಯಲ್ಲಿ ತೊಂದರೆ ದೈಹಿಕ ಬೆಳವಣಿಗೆ ಕುಂಠಿತ ವಯಸ್ಕರಲ್ಲಿ ನಿಶ್ಯಕ್ತಿ ಕಾರ್ಯನಿರ್ವಹಣೆಯಲ್ಲಿ ವೈಫಲ್ಯತೆ, ಗಳಗಂಡರೋಗ ಉಂಟಾಗುತ್ತದೆ. ಮಕ್ಕಳಲ್ಲಿ ಬುದ್ದಿಮಾಂದತೆ, ಕಲಿಕೆಯಲ್ಲಿ ಹಿಂದುಳಿವಿಕೆ, ಸರಿಪಡಿಸಲಾಗದ ದೈಹಿಕ ಮತ್ತು ಮಾನಸಿಕ ವಿಕಲತೆ, ಕುಂಠಿತ ಬೆಳವಣಿಗೆ, ಕಿವುಡು ಹಾಗೂ ಮೂಕತನ, ಮೆಳ್ಳಗಣ್ಣು, ಕುಬ್ಬತನ ಉಂಟಾಗುತ್ತದೆ. ಆದ್ದರಿಂದ ಮೇಲ್ಕಾಣಿಸಿದ ಗುಂಪಿನವರು ಅಯೋಡಿನ್ ಉಪ್ಪನ್ನು ಬಳಸಬೇಕೆಂದು ತಿಳಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ ಶಿವಾನಂದ, ಜಿಲ್ಲಾ ಸರ್ವಕ್ಷಣಾ ಘಟಕದ ಎಲ್.ವಿ. ಸಜ್ಜನರ್, ಹಿರಿಯ ಆರೋಗ್ಯ ನಿರಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಪ್ರಯೋಗಾಲಯದಿಂದ ತಾಂತ್ರಿಕ ಅಧಿಕಾರಿಗಳಾದ ಸುಧೀರ, ರಾಜಕುಮಾರ, ಮೈಕ್ರೋಬಯಾಲೊಜಿಸ್ಟ್ ಹರ್ಷವರ್ಧನ , ನಗರ ಪ್ರಾಥಮಿಕದ ಆರೋಗ್ಯ ಸುರಕ್ಷತಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!