ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹು ಮುಖ್ಯ : ಯು.ವೆಂಕೋಬ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 24- ಪ್ರತಿಯೊಬ್ಬರು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹು ಮುಖ್ಯ ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ವಕೀಲರ ಸಂಘದ ತಾಲೂಕು ಅಧ್ಯಕ್ಷ ಯು.ವೆಂಕೋಬ ಹೇಳಿದರು.
ನಗರದ ಬಿಇ ಹನುಮಂತಮ್ಮ ಡಿಗ್ರಿ ಕಾಲೇಜು ಸಭಾಂಗಣದಲ್ಲಿ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಸಿರುಗುಪ್ಪ ಹಾಗೂ ವಕೀಲರ ಸಂಘ ಸಿರುಗುಪ್ಪ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ಹಿರಿಯ ವಕೀಲ ಅಬ್ದುಲ್ ಸಾಬ್ ರಾರಾವಿ ಮಾತನಾಡಿ, ಈಗ ನಾವು ಕಲುಷಿತ ವಾತಾವರಣದಲ್ಲಿ ವಾಸ ಮಾಡುತ್ತಿದ್ದೇವೆ ಮಾನಸಿಕವಾಗಿ ಆರೋಗ್ಯದಲ್ಲಿ ಏರುಪೇರು ಆಗುತ್ತಿರುವುದು ವಿದ್ಯಾರ್ಥಿಗಳು ಜೀವನದಲ್ಲಿ ಯೋಗ ಧಾನ್ಯ ಪ್ರಾಣ ಯಾಮ ಮಾಡುವುದರಿಂದ ಮಾನಸಿಕ ಸ್ಥಿತಿ ಆರೋಗ್ಯವಾಗಿ ಇರುತ್ತವೆ ಎಂದು ಸಲಹೆ ನೀಡಿದರು.
ಇದೇ ವೇಳೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ, ವಕೀಲ ಮಲ್ಲಿಗೌಡ, ವೆಂಕಟೇಶ್ ನಾಯಕ್, ಮಹೇಶ್, ಜಗದೀಶ್, ಪ್ರಾಂಶುಪಾಲ ಬಸವನಗೌಡ ಹಾಗೂ ವಿದ್ಯಾರ್ಥಿಗಳು ಇದ್ದರು.
