ಜಿಟಿಟಿಸಿ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ ಪರಿಕ್ಷೆ : ನಿಷೇದಾಜ್ಞೆ ಜಾರಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 24- ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಹಾಗೂ ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಪರಿಕ್ಷೆಗಳು ಅಕ್ಟೋಬರ್ ೨೬ ಮತ್ತು ಅ.೨೭ರಂದು ನಡೆಯಲಿದ್ದು, ಪರಿಕ್ಷೆಗಳು ಸುಗಮ ಮತ್ತು ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ರ ಕಲಂ ೧೬೩ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಅ.೨೬ರಂದು ಮಧ್ಯಾಹ್ನ ೨.೩೦ರಿಂದ ೪.೩೦ರವರೆಗೆ ಕೊಪ್ಪಳ ನಗರದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ ಅ.೨೭ ರಂದು ಬೆಳಿಗ್ಗೆ ೧೦.೩೦ ರಿಂದ ೧೨.೩೦ ರವರೆಗೆ ಮತ್ತು ಮಧ್ಯಾಹ್ನ ೦೨.೩೦ ರಿಂದ ೪.೩೦ ರವರೆಗೆ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಕನೂರು, ಕುಷ್ಟಗಿ ಹಾಗೂ ಯಲಬುರ್ಗಾ ತಾಲ್ಲೂಕುಗಳು ಸೇರಿ ಒಟ್ಟು ೩೫ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜರಾಕ್ಸ್, ಟೈಪಿಂಗ್ ಸೆಂಟರ್‌ಗಳನ್ನು ನಿಷೇಧಿಸಿದೆ.
ಪರೀಕ್ಷೆಯಲ್ಲಿ ಪ್ರವೇಶ ಪತ್ರವನ್ನು ಹೊಂದಿದ ಅಭ್ಯರ್ಥಿಗಳು, ನಿಯೋಜಿತ ಶಿಕ್ಷಕರು ಹಾಗೂ ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರದ ೨೦೦ ಮೀಟರ್ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ.
ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
