8

ಮಕ್ಕಳನ್ನು ಪೌಷ್ಠಿಕರನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯ : ಅಮ್ಜದ್ ಪಟೇಲ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 24- ಮಕ್ಕಳು ದೇಶದ ಸಂಪತ್ತು ಆಗಿದ್ದು, ಮಕ್ಕಳನ್ನು ಪೌಷ್ಠಿಕರನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆ, ಕೊಪ್ಪಳ ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ಗುರುವಾರ ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ್ ಅಭಿಯಾನ ಕೇಂದ್ರ ಸರ್ಕಾರ ಯೋಜನೆಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೌಷ್ಠಿಕತೆ ಪ್ರತಿಯೊಬ್ಬ ಮಗುವಿನ ಪ್ರಾಥಮಿಕ ಹಕ್ಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಕ್ಕಳ ಪೌಷ್ಠಿಕತೆಗಾಗಿ ವಿವಿಧ ವಿಶೇಷ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ ಪೋಷಣ್ ಅಭಿಯಾನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ತಾಯಿ ಮತ್ತು ಗರ್ಭಿಣಿಯರು ಪ್ರಾರಂಭದಲ್ಲಿಯೇ ವಿಶೇಷ ಪೌಷ್ಟಿಕ ಆಹಾರವನ್ನು ಪಡೆದು ಆರೋಗ್ಯವಂತ ಮಗುವನ್ನು ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆಯಾಗಿ ನೀಡಬೇಕೆಂದು ತಿಳಿಸಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ರಾಮಕೃಷ್ಣ ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪಿ.ಎಮ್. ಸೂರ್ಯ ಘರ್ ಯೋಜನೆ, ವಿಕಸಿತ ಭಾರತ, ಪಿ.ಎಮ್ ದೂರದರ್ಶಿತ್ವ-೨೦೪೭ರ ಕುರಿತು ಫಲಾನುಭವಿಗಳಿಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ ಶೆಟ್ಟಪ್ಪನವರ್ ಅವರು ಮತನಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿನ ಮಹಿಳೆಯರು ಗರ್ಭಿಣಿ ಇರುವಾಗ ಮಗುವಿನ ಆರೋಗ್ಯ ರಕ್ಷಣೆ ಬಗ್ಗೆ ಕಾಳಜಿ ವಹಿಸಿ ಅವರಿಗೆ ಪೌಷ್ಟಿಕ ಶಿಬಿರ ಹಾಗೂ ತಾಯಂದಿರ ಸಭೆಗಳಲ್ಲಿ ಪಾಲ್ಗೊಳ್ಳಲು ಅರಿವು ಮೂಡಿಸಬೇಕು. ಉತ್ತಮ ಸಮಾಜದ ವ್ಯಕ್ತಿಗಳನ್ನು ನಿರ್ಮಾಣ ಮಾಡುವ ಸಂಸ್ಥೆ ಅಂಗನವಾಡಿ ಕೆಂದ್ರಗಳಾಗಿರುತ್ತವೆ ಎಂದು ಕಾರ್ಯಕರ್ತೆಯರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಅವರು ಮಾತನಾಡಿ, ವಿವಿಧ ಇಲಾಖೆಯ ಸಹಯೋಗದೊಂದಿಗೆ ಪೋಷಣ್ ಅಭಿಯಾನ ಕಾರ್ಯಕ್ರಮಗಳಿಂದ ಅನಿಮೀಯಾ ಮುಕ್ತ ಭಾರತ ಬಗ್ಗೆ, ಸ್ವಚ್ಚತೆ ಬಗ್ಗೆ, ಪೌಷ್ಟಿಕತೆಯ ಬಗ್ಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರವಹಿಸುವರು ಎಂದು ಹೇಳಿದರು.

ಸಾಹಿತಿ ಹಾಗೂ ಗಾಯಕಿ ಅನ್ನಪೂರ್ಣ ಮನ್ನಾಪುರ ಅವರು ಬಾಲ್ಯವಿಹಾರ ತಡೆ ಹಾಗೂ ಪೌಷ್ಠಿಕ ಆಹಾರ ಕುರಿತು ಜಾಗೃತಿ ಗೀತೆಗಳನ್ನು ಹಾಡಿದರು.

ವಿವಿಧ ಸ್ಪರ್ಧೆಗಳು : ಕಾರ್ಯಕ್ರಮದ ಅಂಗವಾಗಿ ರಂಗೋಲಿ ಸ್ಪರ್ಧೆ, ಪೌಷ್ಟಿಕ ಆಹಾರ ಸ್ಪರ್ಧೆ, ಹಣ್ಣು ಮತ್ತು ತರಕಾರಿಗಳಿಂದ ಕಾಲಾಕೃತಿ ತಯಾರಿಕೆ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೊಟಗಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಗಂಧದ ಹಾಗೂ ಶಿವಶರಣಪ್ಪ ಗದ್ದಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಸೇರಿದಂತೆ ಮತ್ತಿತರರಿದ್ದರು.

ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ವಲಯದ ಎಲ್ಲಾ ಹಿರಿಯ, ಕಿರಿಯ ಮೇಲ್ವಿಚಾರಕಿಯರು, ಪೋಷಣ್ ಅಭಿಯಾನ ಯೋಜನೆಯ ತಾಲ್ಲೂಕಾ ಸಂಯೋಜಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಫಲಾನುಭವಿಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!