KB

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಧಾರ್ಮಿಕ ಸಂಸ್ಥೆ, ದೇವಾಲಯಗಳಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಗೆ ಸೂಚನೆ

ಕರುನಾಡ ಬೆಳಗು ಸುದ್ದಿ

ವಿಜಯನಗರ, 28- ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿನ ಎಲ್ಲಾ ಧಾರ್ಮಿಕ ಸಂಸ್ಥೆಗಳ ಹಾಗೂ ದೇವಸ್ಥಾನಗಳ ಆಡಳಿತಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿಗಳ, ಆಡಳಿತ ಮುಖ್ಯಸ್ಥರು ನವೆಂಬರ್ ೧ ರಂದು ಆಚರಿಸುವ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಅಕ್ಟೋಬರ್ ೩೧ ಮತ್ತು ನವೆಂಬರ್ ೧ ರಂದು ತಮ್ಮ ವ್ಯಾಪ್ತಿಯಲ್ಲಿನ ಸಂಸ್ಥೆಗಳಿಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕೆಂದು ಮತ್ತು ನವೆಂಬರ್ ೧ ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆ ಮಾಡಿಸುವಂತೆ ಬಳ್ಳಾರಿ ವಿಜಯನಗರ ಜಿಲ್ಲೆಯ ಧರ್ಮಾದಾಯ ದತ್ತಿಗಳ ಇಲಾಖೆಯ ಹಿಂದೂ ಧಾರ್ಮಿಕ ಸಂಸ್ಥೆಗಳು ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!