ನಮ್ಮ ಕಾಲೇಜಿನಲ್ಲಿ ಅಂತರ್ ಕಾಲೇಜು ಕ್ರೀಡಾ ಕೂಟ ಆಯೋಜಿಸಲಾಗುತ್ತದೆ : ಡಾ.ಪ್ರದೀಪ್ ಕುಮಾರ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 28- ನಮ್ಮ ಕಾಲೇಜು ಪ್ರತೀವರ್ಷವು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಕ್ರೀಡಾ ಕೂಟವನ್ನು ಆಯೋಜಿಸುತ್ತಾ ಬಂದಿದೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ಬೋಧಕರಾದ ಡಾ. ಪ್ರದೀಪ್ ಕುಮಾರ್ ಯು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದಿನಾಂಕ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಗಳನ್ನು ಜಿಲ್ಲಾ ಕ್ರೀಡಾಂಗಣ ಕೊಪ್ಪಳ ಇಲ್ಲಿ ಆಯೋಜಿಸಿರುವ ಕ್ರೀಡಾ ಕೂಟದಲ್ಲಿ ಹೇಳಿದರು.

ನಮ್ಮ ಕಾಲೇಜಿನ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿನೀಯರು ಅಕ್ಕಮಹಾದೇವಿ ವಿಶ್ವವಿದ್ಯಾಲಯವನ್ನು ದಕ್ಷಿಣವಲಯ ಹಾಗೂ ಅಖಿಲ ಭಾರತದ ಮಟ್ಟದಲ್ಲಿ ಪ್ರತಿನಿದಿಸಿದ್ದಾರೆ. ವಿದ್ಯಾರ್ಥಿನೀಯರ ಸುಮಾರು ಎಂಟಕ್ಕೂ ಹೆಚ್ಚು ವಿವಿದ ಕ್ರೀಡೆಗಳ ತಂಡಗಳು ಪ್ರತಿವರ್ಷ ಹಲವಾರು ಕ್ರೀಡೆಗಳಲ್ಲಿ ಭಾಗವಹಿಸಿ ಸಾಧನೆಯನ್ನು ಮಾಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ ಗಣಪತಿ ಕೆ ಲಮಾಣಿ ಮಾತನಾಡುತ್ತಾ ನಮ್ಮ ಕಾಲೇಜಿನಲ್ಲಿ ಕ್ರೀಡಾ ವಿಭಾಗವು ಅತ್ಯಂತ ಕ್ರೀಯಾಶೀಲವಾಗಿ ಕೆಲಸ ನಿರ್ವಹಿಸುತ್ತಿದೆ, ಪ್ರತೀ ವರ್ಷವು ಒಂದು ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸುತ್ತೇವೆ. ಎಲ್ಲರೂ ಕ್ರೀಡಾ ಮನೋಭಾವನೆ ಇಂದ ಭಾಗವಹಿಸಿ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ಕ್ರೀಡಾಪಟುಗಳಿಗೆ ಸಲಹೆನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ವಿಠಲ ಬಿ ಜಾಬಗೌಡರ ಇವರು ಮಾತನಾಡುತ್ತಾ ವಿದ್ಯಾರ್ಥಿಗಳು ಕ್ರೀಡೆಯಿಂದಲೂ ಉನ್ನತ ಮಟ್ಟದ ಜೀವನವನ್ನು ರೂಪಿಸಿಕೊಳ್ಳಬಹುದು ಪಾಠದ ಜೊತೆಗೆ ಆಟದಲ್ಲಿಯೂ ವಿದ್ಯಾರ್ಥಿಗಳು ಆಸಕ್ತಿಯನ್ನು ಬೆಳಸಿಕೊಳ್ಳಬೇಕು, ನಮ್ಮ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಉತ್ತಮ ಮಟ್ಟದ ಒಳ ಕ್ರೀಡಾಂಗಣಗಳನ್ನು ಕ್ರೀಡಾಪಟುಗಳಿಗಾಗಿ ನಿರ್ಮಿಸಿದ್ದೇವೆ ಅದರ ಸದುಪಯೋಗವನ್ನು ತಾವೆಲ್ಲರು ಪಡೆದುಕೊಳ್ಳಬೇಕೆಂದು ಕರೆನೀಡಿದರು.

ಹಿರಿಯ ಸಾಹಿತಿಗಳಾದ ಶ್ರೀ ಅಲ್ಲಮಪ್ರಭು ಬೆಟ್ಟದೂರು ಇವರು ಮಾತನಾಡುತಾ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಿದೆ ಕ್ರೀಡೆ ಇಲ್ಲದೆ ಮನುಷ್ಯ ನಿರಾಸಕ್ತನಾಗುತ್ತಾನೆ, ಕ್ರೀಡೆಯು ಮನುಷ್ಯನಿಗೆ ಉತ್ಸಾಹವನ್ನು ನೀಡುತ್ತದೆ ವಿದ್ಯಾರ್ಥಿಯಾಗಿದ್ದಾಗ ನಾನು ಈಜು ಕ್ರೀಡೆಯಲ್ಲಿ ಪಾಲ್ಗೊಂಡಿದ್ದೇ ಎಂದು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊ0ಡರು.

ನಿವೃತ್ತ ಪ್ರಾಂಶುಪಾಲರಾದ ಶ್ರೀ ಬಿ.ಜಿ.ಕರಿಗಾರರವರು ಮಾತನಾಡುತ್ತಾ ಕ್ರೀಡೆಯು ಒಂದು ಕಡ್ಡಾಯ ವಿಷಯವಾಗಬೇಕು ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯನ್ನು ವಿಷಯವಾಗಿ ಅಧ್ಯಾಯನ ಮಾಡಬೇಕು ಕ್ರೀಡೆಯನ್ನು ಪ್ರಾಥಮಿಕ ಹಂತದಿAದಲೇ ಕಡ್ಡಾಯಗೊಳಿಸಬೇಕು ಹಾಗೂ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರ ನೇಮಿಸಬೇಕು ಎಂದರು.

ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಶ್ರೀ ಎ.ಬಸವರಾಜ ಇವರು ಮಾತನಾಡುತ್ತಾ ಕ್ರೀಡಾಪಟುಗಳು ಸತತ ಪ್ರಯತ್ನದಿಂದ ಹಾಗೂ ಅಭ್ಯಾಸದಿಂದ ಮಾತ್ರ ಯಶಸ್ಸುಗಳಿಸಲು ಸಾಧ್ಯ. ನಾನು ಕೊಪ್ಪಳ ಜಿಲ್ಲೆಯಲ್ಲಿ ಸೇವೆಸಲ್ಲಿಸುತ್ತಾ ೩೦ ವರ್ಷಗಳು ಕಳೆದವು ಕೊಪ್ಪಳ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಕ್ರೀಡಾಂಗಣಗಳು ಅಭಿವೃಧ್ದಿಗೊಳ್ಳುತ್ತವೆ ಕ್ರೀಡಾಪಟುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ಕಾಲೇಜಿನ ರಾಜ್ಯಶಾಸ್ತç ಸಹ ಪ್ರಾದ್ಯಾಪಕರಾದ ಡಾ.ಗವಿಸಿದ್ದಪ್ಪ ಮುತ್ತಾಳ ಇವರು ಮಾತನಾಡುತ್ತಾ ಕೇವಲ ಕ್ರೀಡೆಯಿಂದಲೇ ಹಲವರು ತಮ್ಮ ಜೀವನವನ್ನು ಉನ್ನತ ಮಟ್ಟದಲ್ಲಿ ರೂಪಿಸಿಕೊಂಡ್ಡಿದ್ದಾರೆ ವಿರಾಟ್ ಕೊಹ್ಲಿಯಂತೆ ತಾವೂ ಅತ್ಯಂತ ಕೆಳಮಟ್ಟದಿಂದ ಬೆಳೆದು ಸಮಾಜದಲ್ಲಿ ಒಬ್ಬ ಆದರ್ಶ ವ್ಯಕ್ತಿಯಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು, ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿನೀಯರು ಹಾಜರಿದ್ದರು. ಡಾ.ಹುಲಿಗೆಮ್ಮ ಬಿ ಸ್ವಾಗತಿಸಿದರು, ವಿದ್ಯಾರ್ಥಿನಿ ಭವ್ಯ ಪ್ರಾರ್ಥನೆಯನ್ನು ನೆರವೇರಿಸಿದರು, ಕಾಲೇಜಿನ ವಿದ್ಯಾರ್ಥಿನಿ ಸಾಲಿಯಾ ಬೇಗಂ ನಿರೂಪಿಸಿದರು, ಡಾ. ಮಲ್ಲಿಕಾಜುನ ಗ್ರಂಥಪಾಲಕರು ವಂದಿಸಿದರು.

ಸದರಿ ಕ್ರೀಡಾಕೂಟದಲ್ಲಿ ಬಳ್ಳಾರಿಯ ಎ.ಎಸ್.ಎಂ ಮಹಿಳಾ ಕಾಲೇಜಿನ ವಿದ್ಯಾರ್ಥಿನೀಯರು ಪ್ರಥಮ ಸ್ಥಾನವನ್ನು ಹಾಗೂ ಇಳಕಲ್‌ನ ಎಸ್.ವಿ.ಎಂ ಮಹಿಳಾ ಪದವಿ ಕಾಲೇಜ್ ಇವರು ದ್ವಿತೀಯ ಸ್ಥಾನವನ್ನು ಗಳಿಸಿದರು.

ಈ ಎರಡು ತಂಡಗಳಿಗೆ ಅಭಿನಂದನೆಗಳನ್ನು ತಿಳಿಸುತ್ತಾ ಈ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!