
ಸಂಡೂರು : ವಿಜಯೇಂದ್ರ ನೇತೃತ್ವದಲ್ಲಿ ಪ್ರಬುದ್ಧರ ಸಭೆ
ಕರುನಾಡ ಬೆಳಗು ಸುದ್ದಿ
ಸಂಡೂರು, 4- ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಸಂಡೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರಬುದ್ಧರ ಸಭೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಗಂಗಾವತಿಯ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಚಿತ್ರದುರ್ಗ ಲೋಕಸಭಾ ಸಂಸದ ಗೋವಿಂದ ಎಂ ಕಾರಜೋಳ, ಅಭ್ಯರ್ಥಿ ಬಂಗಾರು ಹನುಮಂತು, ರಾಜ್ಯ ಕಾರ್ಯದರ್ಶಿ ಕೆ.ಎಸ್.ದಿವಾಕರ್ ಹಾಗೂ ಶರಣು ತಳ್ಳಿಕೇರಿ, ಶಾಸಕ ಕೃಷ್ಣ ನಾಯಕ್, ಮಾಜಿ ಶಾಸಕ ಅನಿಲ್ ಲಾಡ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ಉಪಾಧ್ಯಕ್ಷ ಜಿ.ಟಿ.ಪಂಪಾಪತಿ ಹಾಗೂ ಸಂಡೂರಿನ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪ್ರಮುಖರು ಉಪಸ್ಥಿತರಿದ್ದರು.