
ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಪಡೆಯಲು ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 4- 2024-25ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ಗಳನ್ನು ನೀಡಲಾಗುತ್ತಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಶೇ.೭೫ ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ್ದು, ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ಹಾಗೂ ಕನಿಷ್ಠ ಒಂದು ಕೈ, ಒಂದು ಕಣ್ಣು ಸಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢವಾಗಿರುವ ವಿಕಲಚೇತನರಾಗಿರಬೇಕು.
ದೈಹಿಕ ವಿಕಲಚೇತನರಿಗೆ ಜೀವಿತ ಕಾಲದಲ್ಲಿ ಒಂದು ಬಾರಿ ಇಲಾಖೆಯಿಂದ ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ಗಳನ್ನು ನೀಡಲಾಗುತ್ತದೆ. ಫಲಾನುಭವಿಯ ಕುಟುಂಬದ ವಾರ್ಷಿಕ ವರಮಾನ ರೂ.೨ ಲಕ್ಷದ ಒಳಗಿರಬೇಕು. ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು. ಇತರೆ ಇಲಾಖೆಗಳಿಂದ ಅಥವಾ ಸಂಘ ಸಂಸ್ಥೆಗಳಿAದ ಬ್ಯಾಟರಿ ಚಾಲಿತ ವ್ಹೀಲ್ ಚೇರ್‌ಗಳನ್ನು ಪಡೆದಿರಬಾರದು.
ಅರ್ಹ ಫಲಾನುಭವಿಗಳು ಯು.ಡಿ.ಐ.ಡಿ ಕಾರ್ಡ್, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ (ಕನಿಷ್ಟ ೧೦ ವರ್ಷ), ೨ ಭಾವಚಿತ್ರಗಳು, ಈ ಹಿಂದೆ ಇತರೆ ಇಲಾಖೆಗಳಲ್ಲಿ ಅಥವಾ ಸಂಘ ಸಂಸ್ಥೆಗಳಿAದ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಹಾಗೂ ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆದಿಲ್ಲವೆಂದು ರೂ.೧೦೦ ಛಾಪಾ ಕಾಗದ ನೋಟರಿ ದೃಢೀಕರಣ ಪ್ರಾಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ಗಳೊಂದಿಗೆ ನವೆಂಬರ್ ೨೨ ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕೊಪ್ಪಳ ಇವರ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಾಲೂಕು ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲೂಗಳನ್ನು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯುಆರ್‌ಡಬ್ಲೂಗಳನ್ನು ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಆರ್‌ಡಬ್ಲೂಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.