1

ಶಾಸಕ ಜನಾರ್ದನ್ ರೆಡ್ಡಿ ಸಮಕ್ಷದಲ್ಲಿ, ಹಲವರು ಬಿಜೆಪಿ ಸೇರ್ಪಡೆ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 5- ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ಧನ್ ರೆಡ್ಡಿ ಅವರ ಸಮ್ಮುಖದಲ್ಲಿ ಇಂದು ಹಲವಾರು ಮಂದಿ ಬಿಜೆಪಿ ಪಕ್ಷ ಸೇರ್ಪಡೆಯಾದರು. ಸಂಡೂರು ಪಟ್ಟಣದ ೧೬ನೇ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಸ್ಮಾಯೆರ್ ಕಾಲೋನಿಯಲ್ಲಿ ನಡೆದ ಅಲ್ಪಸಂಖ್ಯಾತರ ಸಭೆಯಲ್ಲಿ ೨೦೦ ಕ್ಕೂ ಹೆಚ್ಚು ಮುಸ್ಲಿಂ ಬಾಂಧವರು, ಗಾಲಿ ಜನಾರ್ದನ ರೆಡ್ಡಿ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಹಾಗೂ ಅಭಿವೃದ್ಧಿಯ ಆಶಯಗಳನ್ನು ಬಯಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವ ಮೂಲಕ ಪಕ್ಷದ ಗೆಲುವಿಗಾಗಿ ಶ್ರಮಿಸುವದಾಗಿ ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಗಾಲಿ ಜನಾರ್ದನ್ ರೆಡ್ಡಿ ಮಾತನಾಡುತ್ತಾ, ಸಂಡೂರು ವಿಧಾನಸಭಾ ಕ್ಷೇತ್ರ ಸಂಪೂರ್ಣ ಅಭಿವೃದ್ಧಿಗಾಗಿ ಬಿಜೆಪಿ ಕಂಕಣ ಕಟ್ಟಿಕೊಂಡಿರುವದಾಗಿ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಮತನೀಡಿ ಗಳಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಬಂಗಾರು ಹನುಮಂತು, ರಾಜ್ಯ ಬಿಜೆಪಿ ಕಾರ್ಯದರ್ಶಿ ಕೆ.ಎಸ್.ದಿವಾಕರ್, ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ನೂರ್ ಮಹಮ್ಮದ್, ಪುರಸಭೆ ಸದಸ್ಯ ನರಸಿಂಹ, ದಿಲಿಪ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ಕಾರ್ಯದರ್ಶಿ ಕಲಂದರ್, ಪುರಸಭೆ ಸದಸ್ಯ ಮುನಫ್ ಖಾದರ್, ಬಳ್ಳಾರಿಯ ಮುಖಂಡ ಮುನ್ನಾಭಾಯ್, ಮಾಜಿ ಬುಡ ಅಧ್ಯಕ್ಷ ದಮ್ಮೂರ್ ಶೇಖರ್, ಅಬ್ದುಲ್ ಖಾದರ್, ಖಾದರ್ ಭಾಷಾ ಸೇರಿದಂತೆ ಹಲವಾರು ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!